ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಕೆ.ಆರ್. ನಗರ: ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ 2012-13ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳು ಜೂ.30ರೊಳಗೆ ತಮ್ಮ ಅಂಕಪಟ್ಟಿಯ ನಕಲು ಪ್ರತಿಯೊಂದಿಗೆ ಅರ್ಜಿ ಚಂದ್ರಶೇಖರ್, ಅಧ್ಯಕ್ಷರು, ಅಖಿಲ ಭಾರತ ವೀರಶೈವ ಮಹಾಸಭಾ, ತಾಲೂಕು ಘಟಕ, ವಿಜಯನಗರ ಬಡಾವಣೆ, ಕೆ.ಆರ್. ನಗರ ಇಲ್ಲಿಗೆ ಸಲ್ಲಿಸಲು ಸೂಚಿಸಿದೆ. ಮೊ. 9742792487 ಸಂಪರ್ಕಿಸಿ.
ಬಲರಾಂಗೆ ಸ್ಥಾನ ನೀಡಲು ಆಗ್ರಹ
ಟಿ. ನರಸೀಪುರ: ಕಾಂಗ್ರೆಸ್ ಹಿರಿಯ ಮುಖಂಡ, ಜಿಪಂ ಮಾಜಿ ಅಧ್ಯಕ್ಷ ಕೆ.ಸಿ. ಬಲರಾಂ ಅವರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಬಲರಾಂ ಸ್ನೇಹ ಬಳಗ ಹಾಗೂ ಎಪಿಎಂಸಿ ಹೊರಗುತ್ತಿಗೆ ನೌಕರರ ಸಂಘ ಒತ್ತಾಯಿಸಿದೆ. ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ನಾಯಕರಾಗಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೆ.ಸಿ. ಬಲರಾಂ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳು ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನ ಮಾನ ನೀಡಬೇಕೆಂದು ಸಂಘದ ಅಧ್ಯಕ್ಷ ಶಿವರಾಮ ಕಾಂಗ್ರೆಸ್ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.
ನಾಳೆ ರೈತರ ಸಭೆ
ಟಿ. ನರಸೀಪುರ: ರೈತರ ಪ್ರಸ್ತುತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕು ಘಟಕದ ವತಿಯಿಂದ ಜೂ.22ರ ಬೆಳಗ್ಗೆ 11ಕ್ಕೆ ಇಲ್ಲಿನ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ರೈತರ ಸಭೆ ಕರೆಯಲಾಗಿದೆ. ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅಧ್ಯಕ್ಷತೆ ವಹಿಸುವರು. ತಾಲೂಕಿನ ರೈತರು ಮತ್ತು ರೈತ ಮುಖಂಡರು ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಸ್ಯೆಗಳ ಬಗ್ಗೆ ತಿಳಿಸಿಕೊಡಬೇಕೆಂದು ತಾಲೂಕು ಘಟಕದ ಅಧ್ಯಕ್ಷ ಕಿರಗಸೂರು ಶಂಕರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

