ನಾಳೆ ಕೂಡ್ಲಾಪುರ ಗ್ರಾಮದಲ್ಲಿ ಪಿಂಚಣಿ ಅದಾಲತ್
ಕ.ಪ್ರ.ವಾರ್ತೆ ನಂಜನಗೂಡು ಜೂ. 21
ತಾಲೂಕಿನ ಕೂಡ್ಲಾಪುರ ಗ್ರಾಮದಲ್ಲಿ ಜೂ.23ರ ಬೆಳಗ್ಗೆ 11ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಪಿಂಚಣಿ ಅದಾಲತ್ ನಡೆಸುವರು.
ಗ್ರಾಮೀಣ ಭಾಗದಲ್ಲಿ ಮಾಹಿತಿ ಮತ್ತು ತಿಳಿವಳಿಕೆಯ ಕೊರತೆಯಿಂದ ಅರ್ಹ ಫಲಾನುಭವಿಗಳಿಗೆ ಇಂದಿರಾಗಾಂಧಿ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ವೇತನಗಳು ತಲುಪುತ್ತಿಲ್ಲವೆಂಬುದನ್ನು ಸರ್ಕಾರ ಗಮನಿಸಿ ಈ ಮಾಸಿಕ ಪಿಂಚಣಿಗಳನ್ನು ಅರ್ಹ ಫಲಾನುಭವಿಗಳಿಗೆ ಶೀಘ್ರವಾಗಿ ತಲುಪಿಸುವ ಉದ್ದೇಶದಿಂದ ಈ ಪಿಂಚಣಿ ಅದಾಲತ್ ಏರ್ಪಡಿಸಲಾಗಿದೆ.
ಇಂದಿರಾಗಾಂಧಿ ವೃದ್ಧಾಪ್ಯ ವೇತನಕ್ಕಾಗಿ 60 ವರ್ಷ ವಯಸ್ಸಾಗಿರಬೇಕು. ಅರ್ಜಿಯೊಂದಿಗೆ ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡುಗಳ ನಕಲು ಪ್ರತಿ, ಇತ್ತೀಚಿನ 3 ಭಾವಚಿತ್ರ, ಬ್ಯಾಂಕ್ ಉಳಿತಾಯ ಖಾತೆ, ವೈದ್ಯಕೀಯ ದೃಢೀಕರಣ ಪತ್ರಗಳನ್ನು ಲಗತ್ತಿಸಿ ಸಲ್ಲಿಸಬೇಕು. ನಿರ್ಗತಿಕ ವಿಧವಾ ವೇತನಕ್ಕಾಗಿ ಅರ್ಜಿಯೊಂದಿಗೆ ಪತಿ ಮರಣದ ದೃಢೀಕರಣ ಪತ್ರದ ಮೂಲ ಪ್ರತಿ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡುಗಳ ನಕಲು ಪ್ರತಿ, ಇತ್ತೀಚಿನ 3 ಭಾವಚಿತ್ರ, ಬ್ಯಾಂಕ್ ಉಳಿತಾಯ ಖಾತೆ, 12,000 ಒಳಗಿರುವ ಆದಾಯ ದೃಢೀಕರಣ ಪತ್ರ ಲಗತ್ತಿಸಿ ಸಲ್ಲಿಸುವಂತೆ ತಹಸೀಲ್ದಾರ್ ತಿಳಿಸಿದ್ದಾರೆ.
ಅಂಗವಿಕಲ ವೇತನಕ್ಕಾಗಿ ಅರ್ಜಿಯೊಂದಿಗೆ ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡುಗಳ ನಕಲು ಪ್ರತಿ, ಇತ್ತೀಚಿನ 3 ಭಾವಚಿತ್ರ, ಬ್ಯಾಂಕ್ ಉಳಿತಾಯ ಖಾತೆ, 12,000 ಒಳಗಿರುವ ಆದಾಯ ದೃಢೀಕರಣ ಪತ್ರ, ಅಂಗವಿಕಲತೆ ವೈದ್ಯಕೀಯ ದೃಢೀಕರಣ ಪತ್ರಗಳನ್ನು ಲಗತ್ತಿಸಿ ಸಲ್ಲಿಸಬೇಕು. ಸಂಧ್ಯಾಸುರಕ್ಷಾ ವೇತನಕ್ಕಾಗಿ ಅರ್ಜಿಯೊಂದಿಗೆ ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡುಗಳ ನಕಲು ಪ್ರತಿ, ನೋಟರಿ ಪ್ರಮಾಣಪತ್ರ, ಇತ್ತೀಚಿನ 3 ಭಾವಚಿತ್ರ, ಬ್ಯಾಂಕ್ ಉಳಿತಾಯ ಖಾತೆ, 20 ಸಾವಿರ ರು. ಒಳಗಿರುವ ಆದಾಯ ದೃಢೀಕರಣ ಪತ್ರ, ವೈದ್ಯಕೀಯ ದೃಢೀಕರಣ ಪತ್ರಗಳನ್ನು ಲಗತ್ತಿಸಿ ಸಲ್ಲಿಸಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

