ಮೈಸೂರು

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ

Published On :

ಕ.ಪ್ರ.ವಾರ್ತೆ  ಮೈಸೂರು  ಜೂ. 21
ಇತ್ತೀಚೆಗೆ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ  ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.
ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕವು ಮೈಸೂರು ವೈದ್ಯಕೀಯ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದ ಮುಂಭಾಗದಿಂದ ಆಯೋಜಿಸಿದ್ದ ಈ ಪ್ರತಿಭಟನಾ ಜಾಥಾವನ್ನು ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಬಸವನಗೌಡಪ್ಪ ಉದ್ಘಾಟಿಸಿದರು.
ಸಂಘದ ಅಧ್ಯಕ್ಷ ಡಾ.ಸಿ. ಶರತ್‌ಕುಮಾರ್, ಉಪಾಧ್ಯಕ್ಷ ಡಾ.ಸುರೇಶ್ ರುದ್ರಪ್ಪ, ಡಾ.ಎಂ.ಎಸ್. ಕೆಂಪೇಗೌಡ, ಕಾರ್ಯದರ್ಶಿ ಡಾ.ಪಿ.ಪುಟ್ಟಸ್ವಾಮಿ, ಖಜಾಂಚಿ ಡಾ.ಬಿ.ಎನ್. ಆನಂದ ರವಿ, ಸದಸ್ಯರಾದ ಡಾ. ಶಿವಶಂಕರ್, ಡಾ. ಹರೀಶ್, ಡಾ. ಪ್ರಸನ್ನಶೆಟ್ಟಿ ಇದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಡಾ.ಸಿ.ಶರತ್‌ಕುಮಾರ್, ಪ್ರಜಾಪ್ರಭತ್ವ ವ್ಯವಸ್ಥೆಯಲ್ಲಿ ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಕಾನೂನು ಮುಂದೆ ಎಲ್ಲರೂ ತಲೆಬಾಗಲೇಬೇಕು. ಆದರೆ ಸತ್ತ ರೋಗಿಯ ಕಡೆಯವರು ಕಾನೂನು ಕೈಗೆ ತೆಗೆದುಕೊಂಡು ವೈದ್ಯರನ್ನು ಥಳಿಸುವುದು, ಆಸ್ಪತ್ರೆಯ ಪೀಠೋಪಕರಣ ಧ್ವಂಸಗೊಳಿಸುವುದು ಮಾನವೀಯತೆಯಲ್ಲ. ಪ್ರತಿಯೊಬ್ಬ ವೈದ್ಯರು ರೋಗಿಯನ್ನು ಉಳಿಸಬೇಕೆಂದು ಬಯುಸುತ್ತಾನೆ ಹೊರತು ಸಾಯಿಸಬೇಕೆಂದಲ್ಲ ಎಂಬುದು ಅರಿಯಬೇಕು ಎಂದರು.
ಹಲ್ಲೆಗೆ ಅವಕಾಶ ಇಲ್ಲ: ವೈದ್ಯೋಪಚಾರ ಸಿಬ್ಬಂದಿ ಮೇಲಿನ ಹಿಂಸಾಚಾರ ಮತ್ತು ವೈದ್ಯಕೀಯ ಸಂಸ್ಥೆ ಆಸ್ತಿಗೆ ಹಾನಿ ಮಾಡುವುದನ್ನು ನಿಷೇಧಿಸಿ ಅಧಿನಿಯವನ್ನು 2009 ರಲ್ಲಿ ರಾಜ್ಯದಲ್ಲಿ ಜಾರಿಗೆ ತರಲಾಗಿದೆ. ಅದರನ್ವಯ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದರೆ ಕಾರಾಗೃಹ ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ತಿಳಿಸಿದರು.   
ವೈದ್ಯಕೀಯ ಸಿಬ್ಬಂದಿ ನೆಮ್ಮದಿಯಿಂದ ಕರ್ತವ್ಯ ನಿರ್ವಹಿಸಲು ಅಗತ್ಯ ಭದ್ರತೆ ಒದಗಿಸಬೇಕು. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದವರನ್ನು ಕೂಡಲೇ ಬಂಧಿಸಬೇಕು. ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. 2009ರಲ್ಲಿ ವೈದ್ಯರ ರಕ್ಷಣೆಗೆ ಜಾರಿಗೊಳಿಸಿರುವ ಅಧಿನಿಯಮದ ಸುತ್ತೋಲೆಯನ್ನು ಎಲ್ಲಾ ಠಾಣೆಗಳಿಗೆ ವಿತರಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.