ಮೈಸೂರು

ಡಿಪ್ಲೊಮಾಪ್ರವೇಶಕ್ಕೆ ಆನ್ಲೈನ್

Published On :

ಮೈಸೂರು: ದೇಶದಲ್ಲಿಯೇ ಮೊದಲ ಬಾರಿಗೆ ಆನ್ಲೈನ್ ಮೂಲಕ ಡಿಪ್ಲೊಮಾ ಪ್ರವೇಶಾತಿ ನಡೆಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ಎಸ್ಜೆಸಿಇ ಆವರಣದಲ್ಲಿರುವ ಜೆಎಸ್ಎಸ್ ಮಹಿಳಾ ಪಾಲಿಟೆಕ್ನಿಕ್ನಲ್ಲಿ ನಡೆಯುತ್ತಿರುವ ಡಿಪ್ಲೊಮಾ ಪ್ರವೇಶಾತಿ ಪ್ರಕ್ರಿಯೆಯನ್ನು ಶನಿವಾರ ವೀಕ್ಷಿಸಿ ಮಾತನಾಡಿ, ತಾಂತ್ರಿಕ ಜ್ಞಾನ ಹೆಚ್ಚಿಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಈ ಬಾರಿ ಡಿಪ್ಲೊಮಾ ಪ್ರವೇಶಕ್ಕೆ ಆನ್ಲೈನ್ ಮೂಲಕ ಚಾಲನೆ ನೀಡಲಾಗಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳಬೇಕು ಎಂದರು.
ರಾಜ್ಯಾದ್ಯಂತ 11 ಕೇಂದ್ರಗಳಲ್ಲಿ ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಿದ್ದು, ಹೊಸ ಪ್ರಯೋಗಕ್ಕೆ ಬೆಂಬಲ ವ್ಯಕ್ತವಾಗಿದೆ. ಸರ್ಕಾರದ ಪಾರದರ್ಶಕ ಆಡಳಿತಕ್ಕೆ ಈ ವಿಧಾನ ಪೂರಕವಾಗಿದೆ. ವಿದ್ಯಾರ್ಥಿಗಳು ಚೆನ್ನಾಗಿ ಓದಿ ಜ್ಞಾನ ವೃದ್ಧಿಸಿಕೊಂಡು ಉತ್ತಮ ಚಾರಿತ್ರ್ಯ ಬೆಳೆಸಿಕೊಳ್ಳಬೇಕು. ಮುಂದಿನ ವರ್ಷದಿಂದ ಡಿಪ್ಲೊಮಾ ಓದಿದವರು ನೇರವಾಗಿ ಬಿ.ಎಸ್ಸಿಗೆ ಪ್ರವೇಶ ಪಡೆಯಬಹುದು ಎಂದು ತಿಳಿಸಿದರು. ಇದೇ ವೇಳೆ ಡಿಪ್ಲೊಮಾ ಪ್ರವೇಶಾತಿಗೆ ಆನ್ಲೈನ್ ಸಾಫ್ಟ್ವೇರ್ ರೂಪಿಸಿದ ತಜ್ಞ ರವಿ ತಳವಾರ್ ಅವರನ್ನು ಸಚಿವರು ಅಭಿನಂದಿಸಿದರು. ಚಾಮರಾಜ ಕ್ಷೇತ್ರದ ಶಾಸಕ ವಾಸು, ಕಾಂಗ್ರೆಸ್ ಮುಖಂಡ ಕೆ.ಆರ್. ಮೋಹನ್ಕುಮಾರ್, ಜಿಲ್ಲಾಧಿಕಾರಿ ಡಾ. ರಾಮೇಗೌಡ, ಜೆಎಸ್ಎಸ್ ಮಹಾವಿದ್ಯಾಪೀಠದ ಗೌರವ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್, ಎಸ್ಜೆಸಿಇ ಪ್ರಾಂಶುಪಾಲ ಡಾ.ಬಿ.ಜಿ. ಸಂಗಮೇಶ್ವರ, ಜೆಎಸ್ಎಸ್ ಅಂಗವಿಕಲರ ಪಾಲಿಟೆಕ್ನಿಕ್ ಪ್ರಾಂಶುಪಾಲ ಬಸವರಾಜು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.