ಮೈಸೂರು

ಹರಿಹರಗೆ ಸ್ಥಾನ ನೀಡಲು ಆಗ್ರಹ

Published On :

ಪಿರಿಯಾಪಟ್ಟಣ: ದಲಿತ ಮುಖಂಡ ಹರಿಹರ ಆನಂದಸ್ವಾಮಿ ಅವರಿಗೆ ಎಂಎಲ್ಸಿ ಸ್ಥಾನ ನೀಡುವಂತೆ ದಲಿತ ಮುಖಂಡ ಅಣ್ಣಯ್ಯ ಆಗ್ರಹಿಸಿದ್ದಾರೆ. ಅನೇಕ ವರ್ಷಗಳಿಂದ ದಲಿತ ಜನಾಂಗದ ಅಭಿವೃದ್ಧಿಗಾಗಿ ಶ್ರಮಿಸುತ್ತಾ, ತಂಬಾಕು ಬೆಳೆಗಾರರ ಹೋರಾಟ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಕ್ರಮ ಮಾಡುತ್ತಿದ್ದು, ಕಳೆದ 10 ವರ್ಷಗಳಿಂದ ಕಾಂಗ್ರೆಸ್ನಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದು, ಅವರಿಗೆ ಎಂಎಲ್ಸಿ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿದ್ದಾರೆ.
'ಅಡುಗೆ ಅನಿಲ ಗ್ರಾಹಕರ ಶೋಷಣೆ'
ಟಿ. ನರಸೀಪುರ: ಇಲ್ಲಿನ ಭಾರತ್ ಗ್ಯಾಸ್ ವಿತರಕರಾದ ಎಸ್.ಆರ್. ಗ್ಯಾಸ್ನವರು ಗ್ರಾಹಕರನ್ನು ನಿರಂತರವಾಗಿ ವಂಚಿಸಿ, ಬಿಪಿಎಲ್ ಪಡಿತರ ಚೀಟಿದಾರರಿಂದ ಅಕ್ರಮವಾಗಿ ಠೇವಣಿ ಹಣ ಸಂಗ್ರಹಿಸಿದ್ದಾರೆ ಎಂದು ದಲಿತ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂ. ಪುಟ್ಟಸ್ವಾಮಿ ಭೀಮದಾಸ ಆರೋಪಿಸಿದರು. ಪಟ್ಟಣ ಪ್ರದೇಶ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಸುಮಾರು 20 ಸಾವಿರ ಗ್ರಾಹಕರಿಗೆ ಪ್ರತಿನಿತ್ಯ ಅಡುಗೆ ಅನಿಲ ಸಿಲಿಂಡರ್ಗಳನ್ನು ಸರಬರಾಜು ಮಾಡುತ್ತಿರುವ ಈ ಏಜೆನ್ಸಿಯವರು 10 ಸಾವಿರ ಗ್ರಾಹಕರಿಗೆ ಮಾತ್ರ ಅಧಿಕೃತವಾಗಿ ಅಡುಗೆ ಅನಿಲ ಸಿಲಿಂಡರ್ಗಳನ್ನು ಪೂರೈಸುತ್ತಿರುವುದಾಗಿ ಲೆಕ್ಕದಲ್ಲಿ ತೋರಿಸುವ ಮೂಲಕ ವಂಚನೆಯ ಜಾಲವನ್ನೆ ಸೃಷ್ಟಿಸಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ನರಸೀಪುರದ ಗ್ಯಾಸ್ ಏಜೆನ್ಸಿಯವರು ಯಾವೊಬ್ಬ ಬಿಪಿಎಲ್ ಕಾರ್ಡುದಾರರಿಗೆ ಉಚಿತ ಸಂಪರ್ಕ ನೀಡಿಲ್ಲ. ಠೇವಣಿ ಹಣವನ್ನು ಪಡೆದುಕೊಂಡೆ ಸಂಪರ್ಕ ಕಲ್ಪಿಸಿದ್ದಾರೆ ಎಂದು ದೂರಿದರು. ಸರ್ಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಪರಿಶೀಲಿಸಿ, ಗ್ಯಾಸ್ ವಿತರಣೆಯ ಏಜೆನ್ಸಿಯನ್ನೇ ರದ್ದುಗೊಳಿಸಬೇಕು. ಕಾನೂನಿನಡಿ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.