ಮೈಸೂರು

ಕಲಾವಿದೆ ಸ್ಮರಣೆಗೆ ಚಿತ್ರಕಲಾ ಸ್ಪರ್ಧೆ

Published On :

ಕ.ಪ್ರ.ವಾರ್ತೆ   ಮೈಸೂರು   ಜೂ. 23
ಚಿತ್ರಕಲಾ ಕ್ಷೇತ್ರದಲ್ಲಿ ಉದಯ್ಮೋನುಖ ಕಲಾವಿದೆಯೂ ಆಗಿದ್ದ ಪ್ರತಿಭಾವಂತ ವಿದ್ಯಾರ್ಥಿನಿ ದಿ. ಕಾವ್ಯಾ ಅವರ ಸ್ಮರಣೆಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಭಾನುವಾರ ಜಯಲಕ್ಷ್ಮೀಪುರಂನ ಕುವೆಂಪು ಟ್ರಸ್ಟ್ನಲ್ಲಿ ನಡೆಸಲಾಯಿತು.
ಮುಖ್ಯಪ್ರಾಣ ಸಾಂಸ್ಕೃತಿಕ ಅಕಾಡೆಮಿಯು ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿದ್ದ ಈ ಚಿತ್ರಕಲಾ ಸ್ಪರ್ಧೆಯನ್ನು ಶಾಸಕ ವಾಸು ಉದ್ಘಾಟಿಸಿದರು.   
ಹಿರಿಯ ಸಾಹಿತಿ ಡಾ. ಸಿಪಿಕೆ, ನಗರ ಪಾಲಿಕೆ ಸದಸ್ಯ ಸ್ನೇಕ್ ಶ್ಯಾಂ, ಚಿತ್ರನಟ ಸೂರಜ್ಗೌಡ ಮುಖ್ಯ ಅತಿಥಿಗಳಾಗಿದ್ದರು. ಸಂಸ್ಥೆಯ ಅಧ್ಯಕ್ಷ ಎಂ.ಎನ್. ವಿಜಯ ವೆಂಕಟೇಶ್, ಕಾರ್ಯಾಧ್ಯಕ್ಷ ಡಾ. ಎಂ.ಜಿ. ಆರ್. ಅರಸ್, ಉಪಾಧ್ಯಕ್ಷೆ ಡಾ. ಅನುಸೂಯ ಕೆಂಪನಹಳ್ಳಿ, ಪ್ರಧಾನ ಕಾರ್ಯದರ್ಶಿ ಜಿ.ಪಿ. ಸಿದ್ದೇಗೌಡ, ಕಾರ್ಯದರ್ಶಿ ಆಶಾ ಶಂಕರೇಗೌಡ, ಗಾಯಕ ಸಾಂಭವ ಮೂರ್ತಿ ಇದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯಕ್ರಮದ ರೂವಾರಿ ಎಂ.ಎನ್. ವಿಜಯ ವೆಂಕಟೇಶ್, ಇಲ್ಲಿನ ವಿದ್ಯಾಶ್ರಮ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಕಾವ್ಯಾ ಪ್ರತಿಭಾವಂತೆಯಾಗಿದ್ದರು. ಆಕಸ್ಮಿಕವಾಗಿ ಅಗಲಿದ ಕಾರಣ, ಪ್ರತಿವರ್ಷ ಅವರ ನೆನಪಿಗಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡುವುದು ಹಾಗೂ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗುತ್ತಿದೆ ಎಂದರು.
ಬಾಲ್ಯದಿಂದಲೇ ಚಿತ್ರಕಲೆಯಲ್ಲಿ ಅಪಾರ ಆಸಕ್ತಿ ಇರಿಸಕೊಂಡಿದ್ದ ಕಾವ್ಯಾ ಅನೇಕ ಬಹುಮಾನ ಗಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚಿತ್ರಕಲೆ ಅಭಿರುಚಿ ಇರುವ ಮಕ್ಕಳನ್ನು ಪ್ರೋತ್ಸಾಹಿಸುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕಾವ್ಯಾ ಅವರ ತಂದೆ ಮೈಸೂರು ವಿವಿ ಪ್ರಾಧ್ಯಾಪಕ ಡಾ. ಶ್ರೀಕಂಠಸ್ವಾಮಿ ಹಾಗೂ ತಾಯಿ ಭಾರತಿ ಇದ್ದರು. ನಗರದ ವಿವಿಧ ಶಾಲೆಗಳ ಎಲ್ಕೆಜಿ, ಯುಕೆಜಿ ಹಾಗೂ 1 ರಿಂದ 10 ನೇ ತರಗತಿಯ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸಂಸ್ಥೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.