ಮಾದಕ ವ್ಯಸನಕ್ಕೆ ವಿದ್ಯಾರ್ಥಿಗಳು ಹೆಚ್ಚು ಬಲಿ
ಕ.ಪ್ರ.ವಾರ್ತೆ ಮೈಸೂರು ಜೂ. 26
ಮಾದಕ ವಸ್ತುಗಳ ವ್ಯಸನಕ್ಕೆ ಕಾಲೇಜು ವಿದ್ಯಾರ್ಥಿಗಳು ಹೆಚ್ಚು ಬಲಿಯಾಗುತ್ತಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಕೆ.ಎಲ್. ಸುಧೀರ್ ಹೇಳಿದರು.
ಸಾಧ್ವಿ ಫೌಂಡೇಷನ್ ಮತ್ತು ಮೈಸೂರು ನಗರ ಪೊಲೀಸ್ ಸಂಯುಕ್ತವಾಗಿ ಬುಧವಾರ ಸಂಜೆ ಜೆಎಸ್ಎಸ್ ಕಾನೂನು ಕಾಲೇಜು ಸಭಾಂಗಣದಲ್ಲಿ ಅಕ್ರಮ ಮಾದಕವಸ್ತು ಕಳ್ಳಸಾಗಣೆ ಕುರಿತ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ 3 ಮಿಲಿಯನ್ ಮಂದಿ ಮಾದಕ ವ್ಯಸನಿಗಳು ಇದ್ದಾರೆ. ಇದಕ್ಕೆ ಕಾಲೇಜು ವಿದ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ. ಈ ವಿಚಾರದಲ್ಲಿ ಪೋಷಕರು ಎಚ್ಚರವಹಿಸಬೇಕಿದೆ. ಮೈಸೂರಿಗೆ ಹಲವಾರು ಪ್ರವಾಸಿಗಳು ಬರುತ್ತಿದ್ದು, ಇಲ್ಲೂ ಸಹ ಮಾದಕ ವಸ್ತುಗಳ ಮಾರಾಟವಾಗುವ ಸಾಧ್ಯತೆಗಳಿವೆ. ಇದರ ಮೇಲೆ ಪೊಲೀಸರು ಹದ್ದಿನ ಕಣ್ಣು ಇರಿಸಿ, ಮಾದಕ ವಸ್ತು ಮಾರಾಟ ಮಾಡುವವರು ಹಾಗೂ ಖರೀದಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ನಗರದ ಎಸಿಪಿಗಳು, ವಿವಿಧ ಠಾಣೆಗಳ ಪೊಲೀಸ್ ಇನ್ಸ್ಪೆಕ್ಟರ್ಗಳು ಪಾಲ್ಗೊಂಡಿದ್ದರು. ಎಸ್ಎಸ್ ಕಾನೂನು ಕಾಲೇಜು ಪ್ರಾಂಶುಪಾಲ ಪ್ರೊ.ಕೆ.ಎಸ್. ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಶಿವಾನಂದ ಭಾರತಿ, ಡಿಸಿಪಿಗಳಾದ ಬಸವರಾಜ ವೈ. ಮಾಲಗತ್ತಿ, ಕೆ.ಪಿ. ಭೀಮಯ್ಯ, ಸಾಧ್ವಿ ಫೌಂಡೇಶನ್ನ ಸಿ. ಮಹೇಶ್ವರನ್ ಇದ್ದರು.
'ಪರಿಸರ ಕಾಳಜಿ ಇರಲಿ'
ಕೊಳ್ಳೇಗಾಲ: ಪರಿಸರದ ಬಗ್ಗೆ ಮಕ್ಕಳಲ್ಲಿ ವಿದ್ಯಾರ್ಥಿ ದೆಸೆಯಲ್ಲಿಯೇ ಹೆಚ್ಚಿನ ಆಸಕ್ತಿ ಮೂಡಿಸುವಲ್ಲಿ ಶಿಕ್ಷಕರ ಹಾಗೂ ಪೋಷಕರ ಪಾತ್ರ ಪ್ರಮುಖವಾಗಿದೆ ಎಂದು ಹನೂರು ಬಿಇಒ ಸ್ವಾಮಿ ಹೇಳಿದರು.
ತಾಲೂಕಿನ ಲೊಕ್ಕನಹಳ್ಳಿಯಲ್ಲಿ ಸಿ.ವಿ.ರಾಮನ್ ವಿಜ್ಞಾನ ವೇದಿಕೆ, ರಂಗವಾಹಿನಿ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ಅಯೋಜಿಸಲಾಗಿದ್ದ ವನಮಹೋತ್ಸವ ಕಾರ್ಯಕ್ರಮವನ್ನು ಗಿಡ ನೆಟ್ಟು ಉದ್ಘಾಟಿಸಿ ಮಾತನಾಡಿದರು.
ಪರಿಸರದಲ್ಲಿ ಸಮತೋಲನ ಇಲ್ಲದಿದ್ದರೆ ನಮ್ಮ ಅಳಿವು ನಿಶ್ಚಿತವಾಗಲಿದೆ. ಈ ನಿಟ್ಟಿನಲ್ಲಿ ಮಕ್ಕಳು ಪರಿಸರದ ಸಮತೋಲನ ಕಾಯ್ದುಕೊಳ್ಳಬೇಕಿದೆ ಎಂದರು.
ವಲಯ ಅರಣ್ಯಾಧಿಕಾರಿ ನಂದಕುಮಾರ್ ಮಾತನಾಡಿ, ಪರಿಸರ ಉಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು ಎಂದರು.
ಮಳವಳ್ಳಿ ಡಿಇಡಿ ಕಾಲೇಜಿನ ಪ್ರಾಂಶುಪಾಲ ಮಲ್ಲಿಕಾರ್ಜುನ ಮಾತನಾಡಿ, ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾನಿಯಾಗಲಿದ್ದು, ಆದ್ಟು ಪ್ಯಾಸ್ಟಿಕ್ನಿಂದ ದೂರವಿರಬೇಕು ಎಂದರು.
ಈ ಸಂದರ್ಭದಲ್ಲಿ ವಿಜ್ಞಾನ ವೇದಿಕೆ ಅಧ್ಯಕ್ಷ ಶಿವಶಂಕರ್, ರಂಗವಾಹಿನಿಯ ಕಲಾವಿದ ನರಸಿಂಹಮೂರ್ತಿ, ಉಪನ್ಯಾಸಕ ಶಾಂತರಾಜು, ತಾಪಂ ಅಧ್ಯಕ್ಷೆ ದಾಕ್ಷಾಯಿಣಿ, ಉಪಾಧ್ಯಕ್ಷ ನಂಜೆಗೌಡ, ಲೊಕ್ಕನಹಳ್ಳಿ ಕಾಲೇಜು ಪ್ರಾಂಶುಪಾಲ ಎ.ಸಿ.ನಟರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

