ಮೈಸೂರು

ಗ್ರಾಮೀಣ ವಿದ್ಯಾರ್ಥಿಗಳು ಕೀಳರಿಮೆ ಹೊಂದದಿರಿ

Published On :

ಕ.ಪ್ರ.ವಾರ್ತೆ ಮೈಸೂರು ಜೂ. 27
ಯಾವುದೇ ಕಾರಣಕ್ಕೂ ಗ್ರಾಮೀಣ ವಿದ್ಯಾರ್ಥಿಗಳು ಕೀಳರಿಮೆ ಹೊಂದಬಾರದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರೊ.ನೀ. ಗಿರಿಗೌಡ ಹೇಳಿದರು.
ಕುವೆಂಪುನಗರದ ಶ್ರೀ ದೇವಿ ಡೆವಲಪರ್ಸ್ ಸಂಸ್ಥೆಯು ಎಚ್.ಡಿ. ಕೋಟೆಯ ಕ್ಯಾತನಹಳ್ಳಿಯ ಟಿ.ಎಸ್. ಸುಬ್ಬಣ್ಣ ಸಾರ್ವಜನಿಕ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಉಚಿತ ಸಮವಸ್ತ್ರ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಜ್ಞಾನನಿಧಿ ಸುಪ್ತವಾಗಿರುತ್ತದೆ. ಅದು ಪ್ರಕಾಶಮಾನವಾಗಬೇಕಾದರೆ ಆತ್ಮವಿಶ್ವಾಸ ಹಾಗೂ ಆತ್ಮಸ್ಥೈರ್ಯ ರೂಢಿಸಿಕೊಳ್ಳಬೇಕು. ಇದಕ್ಕಾಗಿ ಮೊದಲು ಗ್ರಾಮೀಣ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೀಳರಿಮೆ ಮನೋಭಾವ ಕಿತ್ತೊಗೆಯಬೇಕು ಎಂದರು.
ಗ್ರಾಮೀಣ ವಿದ್ಯಾರ್ಥಿಗಳು ಸಾಧನೆಯ ಗುರಿಯೊಂದಿಗೆ ಮುನ್ನಡೆದು ಸಮಾಜದ ಉನ್ನತ ಹುದ್ದೆಗಳನ್ನು ಅಲಂಕರಿಸಿದಾಗ ಮಾತ್ರ ಹಳ್ಳಿಗಳ ಸರ್ವತೋಮುಖ ಅಭವೃದ್ಧಿ ಸಾಧ್ಯ. ಈ ದಿಕ್ಕಿನಲ್ಲಿ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು. ಲೇಖಕಿ ಪ್ರೊ.ವಿಮಲಶ್ರೀ ಕಾರ್ಯಕ್ರಮ ಉದ್ಘಾಟಿಸಿದರು. ಡೆವಲಪರ್ಸ್ ಮುಖ್ಯ ಪಾಲುದಾರ ಎಚ್.ಕೆ. ಸೋಮಶೇಖರ್ ಇದ್ದರು.
ಶಾಲೆಯ ಮುಖ್ಯಶಿಕ್ಷಕ ಎಂ.ಪಿ. ಜಗದೀಶ್‌ಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯಶಿಕ್ಷಕ ಕೆ. ಮಾರ್ಕಂಡೇಯ, ಗ್ರಾಪಂ ಅಧ್ಯಕ್ಷ ಮರಿಲಿಂಗಯ್ಯ ಹಾಗೂ ಸೋಮಶೇಖರ್ ಕುಟುಂಬದ ಸದಸ್ಯರು ಇದ್ದರು. ಶಿಕ್ಷಕ ಜಯರಾಮೇಗೌಡ ಸ್ವಾಗತಿಸಿದರು. ಮಹೇಶ್ ನಿರೂಪಿಸಿದರು. ಮಹದೇವಪ್ಪ ವಂದಿಸಿದರು.

ತಾಲೂಕು ಕಸಾಪ ಸಮ್ಮೇಳನ ಅಧ್ಯಕ್ಷ ಡಾ.ರಂಗಸ್ವಾಮಿ
ಕ.ಪ್ರ.ವಾರ್ತೆ ಮೈಸೂರು ಜೂ. 27
ಅರಕಲಗೂಡು ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ನಗರದ ಕರ್ನಾಟಕ ರಾಜ್ಯ ಮುಕ್ತ ವಿವಿಯ ಕುವೆಂಪು ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕ ಪ್ರೊ.ಎ. ರಂಗಸ್ವಾಮಿ ಅವರಿಗೆ ಆ ತಾಲೂಕು ಕಸಾಪ ಪದಾಧಿಕಾರಿಗಳು ಅಧಿಕೃತ ಆಹ್ವಾನ ನೀಡಿದರು.
ತಾಲೂಕಿನಲ್ಲಿ ನಡೆಯುತ್ತಿರುವ 2ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿರುವ ಪ್ರೊ.ಎ. ರಂಗಸ್ವಾಮಿ ಅವರನ್ನು ಅವರ ನಿವಾಸದಲ್ಲಿಯೇ ಅರಕಲಗೂಡು ತಾಲೂಕು ಕಸಾಪ ಅಧ್ಯಕ್ಷೆ ಸಿ.ಕೆ. ಶೈಲಶ್ರೀ ಅಭಿನಂದಿಸಿದರು.
ಮಹಾಜನ ಪ್ರಥಮ ದರ್ಜೆ ಕಾಲೇಜು ಕನ್ನಡ ಪ್ರಾಧ್ಯಾಪಕ ಡಾ.ಎಚ್.ಆರ್. ತಿಮ್ಮೇಗೌಡ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಅಧ್ಯಾಪಕ ಡಾ.ಪಿ. ಬೆಟ್ಟೇಗೌಡ, ಸಾಹಿತಿ ನೀಗೂ ರಮೇಶ್ ಇದ್ದರು.
ಅರಕಲಗೂಡು ತಾಲೂಕು ನರಸಿನಕುಪ್ಪೆ ಗ್ರಾಮದ ರಂಗಸ್ವಾಮಿ ಅವರು ಚಾವುಂಡರಾಯನ ಲೋಕೋಪಕಾರ ಒಂದು ಅಧ್ಯಯನ, ಸಮುಚ್ಚಿತ, ಪ್ರಾಚೀನ ಲೌಕಿಕ ಶಾಸ್ತ್ರಗ್ರಂಥಗಳು, ಆಧುನಿಕ ಕನ್ನಡ ಛಂದಸ್ಸು, ಪ್ರಾಚೀನ ಕನ್ನಡ ಛಂದೋಗ್ರಂಥಗಳು ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.