ಮೈಸೂರು

ಕಪಿಲಾ ತಂದ ಪ್ರವಾಹ: ತಗ್ಗು ಪ್ರದೇಶ ಜನರಿಗೆ ಕಟ್ಟೆಚ್ಚರ

Published On :

ಕ.ಪ್ರ.ವಾರ್ತೆ ನಂಜನಗೂಡು ಜೂ. 27
ಕಬಿನಿ ಜಲಾಶಯದಿಂದ 35 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಟ್ಟಿರುವುದರಿಂದ ಕಪಿಲಾ ನದಿಯು ಮೈದುಂಬಿ ಹರಿಯುತ್ತಿದೆ.
ಇಲ್ಲಿನ ಶ್ರೀಕಂಠೇಶ್ವರ ದೇವಸ್ಥಾನದ ಬಳಿಯಿರುವ ಹದಿನಾರು ಕಾಲು ಮಂಟಪ ಭಾಗಶಃ ಮುಳುಗುವ ಹಂತ ತಲುಪಿದ್ದು, ಮೈಸೂರು-ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಗಳು ಶೇ.80 ರಷ್ಟು ತುಂಬಿವೆ.
ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶದಲ್ಲಿ ವಾಸಿಸುವ ಜನತೆಗೆ ಈಗಾಗಲೇ ಎಚ್ಚರಿಸಲಾಗಿದ್ದು, ಅಪಾಯವಾಗದಂತೆ ತಡೆಯಲು ತಾಲೂಕು ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಜ್ಜಾಗಿವೆ ಎಂದು ತಹಸೀಲ್ದಾರ್ ಅರುಳ್‌ಕುಮಾರ್ ಹಾಗೂ ಇನ್‌ಸ್ಪೆಕ್ಟರ್ ರಘು ತಿಳಿಸಿದ್ದಾರೆ.

ಸಮಸ್ಯೆ ಬಗೆಹರಿಸಲು ಶಾಸಕರಿಗೆ ಮನವಿ
ಕ.ಪ್ರ.ವಾರ್ತೆ ಅಂತರಸಂತೆ ಜೂ. 27
ಎಚ್.ಡಿ. ಕೋಟೆ ತಾಲೂಕಿನ ಅಂತರಸಂತೆ ಗ್ರಾಮವು ಹೋಬಳಿ ಕೇಂದ್ರವಾಗಿದ್ದು, ಸಮಸ್ಯೆಗಳನ್ನು ಬಗೆಹರಿಸುವಂತೆ ವರ್ತಕರ ಸಂಘದ ವತಿಯಿಂದ ಶಾಸಕ ಎಸ್.ಚಿಕ್ಕಮಾದು ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಗ್ರಾಮವು ಇತ್ತೀಚೆಗೆ ವಾಣಿಜ್ಯ ಕೇಂದ್ರವಾಗಿದ್ದು, ಇಲ್ಲಿ ಹಲವಾರು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಇಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚಾಗಿದ್ದು, ನಿರಂತರ ವಿದ್ಯುತ್ ಸರಬರಾಜು ಮಾಡುವಂತೆ ಕೋರಿದರು. ಸುಮಾರು 35 ಸಾವಿರ ಜನಸಂಖ್ಯೆ ಇರುವ ಈ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿಲ್ಲದೆ ಎಚ್.ಡಿ. ಕೋಟೆ ಆಸ್ಪತ್ರೆಗೆ ಹೋಗಬೇಕಿದೆ.
ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಮಕ್ಕಳಿಗೆ ಕುಳಿತುಕೊಳ್ಳಲು ಡೆಸ್ಕ್‌ಗಳಿಲ್ಲ ಹಾಗೂ ಶೌಚಾಲಯ ವ್ಯವಸ್ಥೆಯೂ ಇಲ್ಲ ಎಂದು ಹೇಳಿದ್ದಾರೆ. ವರ್ತಕರ ಸಂಘದ ಅಧ್ಯಕ್ಷ ಎನ್.ಎಸ್. ಶ್ಯಾಮಸುಂದರ್, ಕಾರ್ಯದರ್ಶಿಗಳಾದ ಶಿವಮಹದೇವ, ಶರವಣ, ಸಾದಿಲ್‌ಪಾಶ, ಅಪ್ಸರ್‌ಖಾನ್ ಇದ್ದರು.
ಬಸ್ ವ್ಯವಸ್ಥೆ: ಅಂತರಸಂತೆಯಿಂದ ಗುಂಡತ್ತೂರು ಗ್ರಾಮಕ್ಕೆ ಸಂಚರಿಸುತ್ತಿದ್ದ ಬಸ್ ಒಂದು ವಾರದಿಂದ ನಿಲುಗಡೆಯಾಗಿದ್ದು, ಈ ಬಸ್ ಅನ್ನು ಪುನರ್ ಆರಂಭಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.
ಅಂತರಸಂತೆಯಿಂದ ಬೆಳಗ್ಗೆ 6.30ಕ್ಕೆ ಬಿಟ್ಟು ಗುಂಡತ್ತೂರು ತಲುಪುತ್ತಿತ್ತು. ಇಲ್ಲಿನ ಶಾಲಾ- ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಕೂಡಲೇ ಈ ಬಸ್ ಅನ್ನು ಸಂಚರಿಸುವಂತೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.