ಮೈಸೂರು

ವಿದ್ಯಾರ್ಥಿಗಳಿಗೆ ಕ್ರೀಡಾ ಪರಿಕರ ವಿತರಣೆ

Published On :

ಕ.ಪ್ರ.ವಾರ್ತೆ ಹುಣಸೂರು ಜೂ.30
ವಿದ್ಯಾರ್ಥಿಗಳು ಓದುವುದರ ಜತೆಗೆ ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಆರೋಗ್ಯವಂತ ಬದುಕು ಸಾಗಿಸಲು ಸಾಧ್ಯವೆಂದು ಹನಗೋಡು ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ. ಲಲಿತಾ ದೇವೇಗೌಡ ಹೇಳಿದರು.
ತಾಲೂಕಿನ ಹನಗೋಡು ಹೋಬಳಿಯ ನೇರಳಕುಪ್ಪೆ ಪ್ರೌಢಶಾಲೆಯಲ್ಲಿ ಜಿಪಂ ಮತ್ತು ಯುವಜನ ಸೇವಾ ಹಾಗೂ ಕ್ರೀಡೆ ಇಲಾಖೆ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ 15 ಸಾವಿರ ಮೌಲ್ಯದ ಕ್ರೀಡಾ ಪರಿಕರ ವಿತರಿಸಿ ಮಾತನಾಡಿ, ಪೋಷಕರು ತಮ್ಮ ಮಕ್ಕಳಿಗೆ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸುವುದೆ ಮುಖ್ಯವೆಂದು ಒತ್ತಡ ಹೇರಬಾರದು. ಅವರ ದೈಹಿಕ ಮತ್ತು ಮಾನಸಿಕವಾಗಿ ಸದೃಢತೆಗೆ ನೆರವಾಗಬೇಕು ಎಂದರು.
ತಾಪಂ ಸದಸ್ಯ ಗಣಪತಿ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಕೆ.ಎಸ್. ಆನಂದ್, ಮುಖ್ಯ ಶಿಕ್ಷಕ ಚಂದ್ರಪ್ಪ, ದೈಹಿಕ ಶಿಕ್ಷಣ ಶಿಕ್ಷಕಿ ಭಾರತಿ, ಸಹ ಶಿಕ್ಷಕರಾದ ಸಿದ್ದೇಶ್, ಇಮ್ರಾನ್, ರಮೇಶ್, ವೀಣಾ ಇದ್ದರು.

ಕೊಲೆ ಮಾಡಿ ಶವ ಸುಡಲು ಯತ್ನ
ಕೆ.ಆರ್. ನಗರ:
ಪಟ್ಟಣದ ಹೊರವಲಯದಲ್ಲಿರುವ ಚಾಮರಾಜ ಬಲದಂಡೆ ನಾಲೆಯ ಏರಿಯ ಮೇಲೆ ವ್ಯಕ್ತಿಯೊಬ್ಬರನ್ನು ಕೊಲೆಗೈದು ಪೆಟ್ರೋಲ್ ಸುರಿದು ಸುಟ್ಟು ಹಾಕಲು ಪ್ರಯತ್ನಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ನಗರದ ಮುಸ್ಲಿಂ ಬಡಾವಣೆಯ ಅಹಮ್ಮದ್ ಷರೀಫ್ (27) ಕೊಲೆಯಾದ ದುರ್ದೈವಿಯಾಗಿದ್ದು, ಪಟ್ಟಣದ ಭಾರತೀಯ ಆಹಾರ ನಿಗಮದ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಈತನ ಶವ ಭಾನುವಾರ ಬೆಳಗ್ಗೆ ಪತ್ತೆಯಾಗಿದ್ದು, ಸಾರ್ವಜನಿಕರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರಿಂದ ಘಟನೆ ಬೆಳಕಿಗೆ ಬಂದಿದೆ.
ಅಹಮ್ಮದ್ ಷರೀಫ್‌ನ ತಲೆಗೆ ಆಯುಧದಿಂದ ಬಲವಾಗಿ ಹೊಡೆಯಲಾಗಿದ್ದು, ಆತ ಸತ್ತ ನಂತರ ಪೆಟ್ರೋಲ್ ಸುರಿದು ಸುಡಲು ಪ್ರಯತ್ನಿಸಲಾಗಿದೆ. ಸ್ಥಳಕ್ಕೆ ಸಿಪಿಐ ಪ್ರಸನ್ನಕುಮಾರ್, ಪಿಎಸ್‌ಐ ವನರಾಜು ಪರಿಶೀಲಿಸಿದರು. ಈ ಸಂಬಂಧ ಠಾಣೆಯಲ್ಲಿ ದೂರು ದಾಖಲಾಗಿದ್ದು, ಶವ ಪರೀಕ್ಷೆಯ ನಂತರ ಮೃತ ದೇಹವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.