ಅಕ್ರಮ ಎಸಗಿಲ್ಲ: ರಾಮದಾಸ್ ಸ್ಪಷ್ಟನೆ
ಮೈಸೂರು: ನಾನು ಯಾವುದೇ ಚುನಾವಣಾ ಅಕ್ರಮ ಎಸಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರಾಮದಾಸ್ ಸ್ಪಷ್ಟಪಡಿಸಿದ್ದಾರೆ. ಕೃಷ್ಣರಾಜ ಕ್ಷೇತ್ರ ವ್ಯಾಪ್ತಿಯಲ್ಲಿ ತಾವು ಚುನಾವಣಾ ಅಕ್ರಮ ಎಸಗುತ್ತಿರುವುದಾಗಿ ಕಾಂಗ್ರೆಸ್ ಮುಖಂಡರ ನಿಯೋಗವು ಚುನಾವಣಾ ವೀಕ್ಷಕರಿಗೆ ದೂರು ನೀಡಿರುವ ಬಗ್ಗೆ ಶುಕ್ರವಾರ ಸುದ್ದಿಗಾರರು ಗಮನ ಸೆಳೆದಾಗ ಉತ್ತರಿಸಿದ ಅವರು, ನಗರಪಾಲಿಕೆ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಇದನ್ನು ಸಹಿಸಲಾಗದ ಕಾಂಗ್ರೆಸ್ ಫಲಿತಾಂಶಕ್ಕೆ ಮೊದಲೇ ಸೋಲೊಪ್ಪಿಕೊಂಡಿದೆ ಎಂದು ಟೀಕಿಸಿದರು. ನಾನಾಗಲಿ, ನಾನು ಅಧ್ಯಕ್ಷನಾಗಿರುವ ಆಸರೆ ಟ್ರಸ್ಟ್ ಆಗಲಿ ಯಾರಿಗೂ ಯಾವುದೇ ಉಡುಗೊರೆ ನೀಡಿಲ್ಲ. ಚುನಾವಣಾ ಅಕ್ರಮ ಎಸಗಿಲ್ಲ. ಈ ರೀತಿ ಮಾಡಿದ್ದಲ್ಲಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಿ ಎಂದು ಅವರು ಆಗ್ರಹಿಸಿದರು. ಆದರೆ, ಆಸರೆ ಟ್ರಸ್ಟ್ ಜನರ ಪ್ರೀತಿ, ವಿಶ್ವಾಸ ಪಡೆದು ಕೆಲಸ ಮಾಡುತ್ತಿದ್ದು, ಅದರ ವಿರುದ್ಧ ಆರೋಪ ಮಾಡುವುದು ನೋವಿನ ಸಂಗತಿ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

