'ಅಭಿವೃದ್ಧಿ ನೋಡಿ ಜೆಡಿಎಸ್ ಬೆಂಬಲಿಸಿ'
ಕೆ.ಆರ್. ನಗರ: ಪಕ್ಷದ ಅಭ್ಯರ್ಥಿಗಳ ಪರ ಮತ ಚಲಾಯಿಸಲು ಯಾವುದೆ ಹಣ ಮತ್ತು ಇತರ ಆಮಿಷ ಒಡ್ಡದೆ, ಅಭಿವೃದ್ಧಿ ಕಾರ್ಯ ಮುಂದಿಟ್ಟುಕೊಂಡು ಮತಯಾಚಿಸುತ್ತಿದ್ದು, ನನ್ನ ಐದು ವರ್ಷದ ಶಾಸಕತ್ವದ ಅವಧಿಯ ಕೆಲಸ ಜನರಿಗೆ ತೃಪ್ತಿಯಾಗಿದ್ದರೆ ಜೆಡಿಎಸ್ ಪರ ಮತದಾರರು ಬೆಂಬಲ ವ್ಯಕ್ತಪಡಿಸಲಿದ್ದಾರೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ಇಲ್ಲಿನ ಪುರಸಭೆಗೆ ನಡೆಯುವ ಚುನಾವಣೆ ಹಿನ್ನೆಲೆ ವಿವಿಧ ವಾರ್ಡ್ಗಳಿಗೆ ತೆರಳಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿ ಮಾತನಾಡಿ ಅವರು, ರಾಜ್ಯದಲ್ಲಿ ನಮ್ಮ ಪಕ್ಷದ ಸರ್ಕಾರ ಅಧಿಕಾರದಲ್ಲಿ ಇಲ್ಲದಿದ್ದರೂ ಜನರು ನನಗೆ ನೀಡಿದ ಅಧಿಕಾರ ಸದುಪಯೋಗಪಡಿಸಿಕೊಂಡು ಅವರ ನಂಬಿಕೆಗೆ ಚ್ಯುತಿ ಬಾರದಂತೆ ಕೆಲಸ ನಿರ್ವಹಿಸಿದ್ದೇನೆ ಎಂದು ತಿಳಿಸಿದರು.
ಈವರೆಗೆ ನಾನು ಮಾಡಿರುವ ಅಭಿವೃದ್ಧಿ ಕೆಲಸಗಳು ಮತ್ತು ಕೈಗೊಂಡಿರುವ ಕಾಮಗಾರಿಗಳು ನನಗೆ ಸಮಾಧಾನ ತಂದಿದೆ ಹೊರತು ತೃಪ್ತಿ ನೀಡಿಲ್ಲ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸ ಕೈಗೊಳ್ಳಲು ಹಾಗೂ ಪಟ್ಟಣದ ಸಮಗ್ರ ಬದಲಾವಣೆ ಮಾಡಲು ಮತದಾರರು ಜೆಡಿಎಸ್ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ತಾ. ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್, ಪಕ್ಷದ ಅಭ್ಯರ್ಥಿಗಳಾದ ಕೆ.ಆರ್. ಗಿರೀಶ್, ಕೆ.ಎಲ್. ಜಗದೀಶ್. ಕೆ.ವಿ. ಪ್ರಕಾಶ್, ಪುರಸಭಾ ಮಾಜಿ ಸದಸ್ಯ ಕೆ.ಎಲ್. ರೇವಣ್ಣ ಮುಖಂಡ ಆನಂದ್, ವಕ್ತಾರ ಕೆ.ಎಲ್. ರಮೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

