ಮೈಸೂರು

ಅವಶ್ಯವಿರುವವರಿಗೆ ರಕ್ತದಾನ ಮಾಡಿ

Published On :

ಕೆ.ಆರ್. ನಗರ: ಎಲ್ಲಾ ದಾನಗಳಿಗಿಂತ ರಕ್ತದಾನ ಶ್ರೇಷ್ಠವಾದ ದಾನವಾಗಿದ್ದು, ವಿದ್ಯಾರ್ಥಿಗಳು ಅವಶ್ಯಕತೆ ಇರುವವರಿಗೆ ರಕ್ತದಾನ ಮಾಡುವ ಮೂಲಕ ರೋಗಿಗಳಿಗೆ ಸಹಕಾರ ನೀಡಬೇಕು ಎಂದು ಮಿರ್ಲೆ ಪ್ರಾಥಮಿಕ ಆರೋಗ್ಯ ಕಂದ್ರದ ವೈದ್ಯಾಧಿಕಾರಿ ಡಾ. ಉಮಾ ಸಲಹೆ ನೀಡಿದರು.  ತಾಲೂಕಿನ ಮಿರ್ಲೆ ಗ್ರಾಮದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ರೆಡ್ಕ್ರಾಸ್ ಘಟಕ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ದಿನನಿತ್ಯದ ಜೀವನದಲ್ಲಿ ನೈರ್ಮಲ್ಯತೆ ಕಾಪಾಡಿಕೊಳ್ಳುವುದರ ಜತೆಗೆ ವೈಯಕ್ತಿಕ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಡ್ರಗ್ಸ್ ಮುಂತಾದ ಕೆಟ್ಟ ಚಟಗಳ ಕಡೆಗೆ ಆಕರ್ಷಿತರಾಗುತ್ತಿದ್ದು, ಅವರನ್ನು ಜಾಗೃತಗೊಳಿಸಬೇಕಾಗಿದೆ ಎಂದು ಅವರು ಹೇಳಿದರು.  ಉಪನ್ಯಾಸಕ ರವಿಚಂದ್ರನ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಎಚ್.ಟಿ. ತ್ಯಾಗರಾಜು ಅಧ್ಯಕ್ಷತೆ ವಹಿಸಿದ್ದರು. ಕಳೆದ ಸೆಮಿಸ್ಟರ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಂಯೋಜಕರಾದ ಉಪನ್ಯಾಸಕರಾದ ಶಿವಣ್ಣ, ಸಚಿನ್, ವನಿತಾ, ಪರಿಮಳಾ, ಸೌಮ್ಯ, ಸ್ವಾಮಿ, ಶಿವಕುಮಾರ್, ಪ್ರವೀಣ್, ಮಹೇಶ್, ಸಂದೀಪ್, ಪ್ರಸನ್ನಕುಮಾರ್, ಶ್ವೇತಾ, ಆಶಾರಾಣಿ, ಶ್ರೀಪ್ರಿಯ, ಸರ್ವೇಶ್, ಮೋಹನ್, ಗೀತಾ, ಕೌಸಿಕ್, ದಿನೇಶ್, ಸತ್ಯನಾರಾಯಣರಾವ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.