ಮೈಸೂರು

ಕೆ.ಆರ್. ನಗರದಲ್ಲಿ ಡೀವಿ ಪ್ರಚಾರ

Published On :

ಕೆ.ಆರ್. ನಗರ: ಸ್ಥಳಿಯ ಸಂಸ್ಥೆಯ ಚುನಾವಣೆಗಳು ಅಭಿವೃದ್ಧಿಗೆ ಪೂರಕವಾಗಿರಬೇಕು, ಐದು ವರ್ಷಗಳ ಅವಧಿಯಲ್ಲಿ ಬಿಜೆಪಿ ಸ್ಥಳೀಯ ಸಂಸ್ಥೆಗಳ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದು, ಪ್ರಜ್ಞಾವಂತ ಮತದಾರರು ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಮನವಿ ಮಾಡಿದರು.
ಇಲ್ಲಿನ ಪುರಸಭೆಗೆ ಸ್ಪರ್ಧಿಸಿರುವ ಪಕ್ಷದ ಅಭ್ಯರ್ಥಿಗಳ ಪರ ವಿವಿಧ ವಾರ್ಡ್ಗಳಲ್ಲಿ ಸಂಚರಿಸಿ ಮನೆ ಮನೆಗೆ ತೆರಳಿ ಮತ ಯಾಚಿಸಿ ಮಾತನಾಡಿದ ಅವರು, ಕಾಂಗ್ರೆಸ್ ಬಿಜೆಪಿ, 50 ವರ್ಷಗಳಲ್ಲಿ ಸಾಧಿಸದಿದ್ದ ಅಭಿವೃದ್ಧಿ ಕಾರ್ಯವನ್ನು ಬಿಜೆಪಿ ಐದು ವರ್ಷಗಳಲ್ಲಿ ಸಾಧಿಸಿ ತೋರಿಸಿದೆ ಎಂದು ಅವರು ಪಕ್ಷದ ಸಾಧನೆ ಸಮರ್ಥಿಸಿಕೊಂಡರು.
ಗೊಂದಲ ನಿಜ: ಬಿಜೆಪಿಯಲ್ಲಿ ಗೊಂದಲ ಇರುವುದು ನಿಜ ಎಂದ ಮಾಜಿ ಮುಖ್ಯಮಂತ್ರಿಗಳು, ಸರ್ಕಾರದ ಆಡಳಿತದಲ್ಲಿ ಯಾವುದೆ ಗೊಂದಲ ಇಲ್ಲ. ಅಭಿವೃದ್ದಿಯ ಬಗ್ಗೆ ಕೇವಲ ಮಾತನಾಡಿದರೆ ಸಾಲದು, ಮಾಡಿ ತೋರಿಸಬೇಕು. ಎಂದರಲ್ಲದೆ ಮುಂದೆಯು ಪಕ್ಷ ಅಧಿಕಾರದ ಗದ್ದುಗೆ ಏರಲಿದ್ದು, ಕಾರ್ಯಕರ್ತರು ನಿಶ್ಚಿಂತೆಯಿಂದ ಪಕ್ಷದ ಅಭ್ಯರ್ಥಿಗಳ ಪರ ಕೆಲಸ ಮಾಡಿ ಎಂದು ಸಲಹೆ ನೀಡಿದರು.
ತಾ. ಬಿಜೆಪಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಎಸ್.ಡಿ. ಮಹೇಂದ್ರ, ಎಪಿಎಂಸಿ ಅಧ್ಯಕ್ಷ ರಮೇಶ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ದೇವಪಾಲ್, ಪ್ರಭಾಕರ್ ಜೈನ್, ತಾ. ಪ್ರಧಾನ ಕಾರ್ಯದರ್ಶಿಗಳಾದ ಸಿ.ಕೆ. ಬಾಲಮನೋಹರ, ಎಲ್.ಎಸ್. ಮಹೇಶ್, ಪುರಸಭಾ ಚುನಾವಣಾ ಉಸ್ತುವಾರಿ ನಂಜುಂಡಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.