ಸುತ್ತೂರಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಸುತ್ತೂರು: ಇಲ್ಲಿನ ಜೆಎಸ್ಎಸ್ ಬಿ.ಇಡಿ ಮತ್ತು ಎಂ.ಇಡಿ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು.
ಶಾರದಾ ವಿಲಾಸ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ವಿಶ್ವನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮುದಾಯದ ಅಭಿವೃದ್ಧಿಗೆ ವೈಚಾರಿಕತೆ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಕುರಿತು ವಿಶೇಷ ಉಪನ್ಯಾಸ ನೀಡಿ, ವೈಚಾರಿಕ ಮನೋಭಾವದ ದೆಸೆಯಿಂದ ಸಿದ್ಧಾರ್ಥನು ಬುದ್ಧನಾಗಿ ಮಾನವ ಕುಲಕ್ಕೆ ಕಳಶಪ್ರಾಯನಾದ. ಈ ಮನೋಭಾವದಿಂದಲೆ ಬಸವಣ್ಣನವರಿಂದ ಡಾ.ಎಚ್. ನರಸಿಂಹಯ್ಯನವರವರೆಗೂ ವೈಚಾರಿಕ ಚಿಂತನಶೀಲ ವ್ಯಕ್ತಿಗಳನ್ನು ಉದಾಹರಿಸಿ ಸಮಾಜ ಹಾಗೂ ಸಮುದಾಯದ ಅಭಿವೃದ್ಧಿಯಲ್ಲಿ ಅವರ ಪಾತ್ರವನ್ನು ವಿವರಿಸಿದರು.
ಪ್ರಾಂಶುಪಾಲ ಡಾ.ಎಂ.ಸಿ. ನಟರಾಜ್ ಮಾತನಾಡಿ, ರಾಷ್ಟ್ರೀಯ ವಿಜ್ಞಾನ ದಿನಾಚರಣೆಗೆ ಕಾರಣರಾದ ಸರ್ ಸಿ.ವಿ. ರಾಮನ್ ಅವರ ವೈಜ್ಞಾನಿಕ ಕೊಡುಗೆಯಿಂದ ಭಾರತೀಯ ಸಮಾಜ ಹಾಗೂ ವಿಶ್ವವೆ ಹೆಮ್ಮೆ ಪಡುವಂತಾಗಿದೆ. ಈ ದಿನಾಚರಣೆ ಎಲ್ಲ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಆಚರಿಸುವಂತಾಗಬೇಕು ಎಂದು ಅಭಿಪ್ರಾಯಪಟ್ಟರು.
ಕಾಲೇಜಿನ ವಿಜ್ಞಾನ ಸಂಘದ ಸಂಚಾಲಕರಾದ ಎಂ.ಡಿ. ಕೀರ್ತಿಕುಮಾರ್ ಇದ್ದರು. ದಿವ್ಯಾ ಅರಸ್ ವಂದಿಸಿದರು. ಬಿ.ಎನ್. ಸ್ವಾತಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

