'ಪಾಲಿಕೆಯಲ್ಲಿ ಬಿಜೆಪಿಗೆ 35 ಸ್ಥಾನ ಗ್ಯಾರಂಟಿ'
ಮೈಸೂರು: ನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ 30 ರಿಂದ 35 ಸ್ಥಾನಗಳು ಲಭಿಸಲಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಎಂಡಿಎ) ಅಧ್ಯಕ್ಷ ಎಲ್. ನಾಗೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಪಾಲಿಕೆಯ 65 ವಾರ್ಡ್ಗಳ ಪೈಕಿ 63 ಕಡೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ಎಲ್ಲಾ ಜಾತಿ, ಧರ್ಮದವರಿಗೂ ಟಿಕೆಟ್ ನೀಡಲಾಗಿದೆ ಎಂದು ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಬಿಜೆಪಿ ಸರ್ಕಾರವು ಮೈಸೂರಿಗೆ ಹತ್ತಾರು ಯೋಜನೆ ನೀಡಿದೆ. ನಗರಪಾಲಿಕೆ ಮಾಡದ ಕೆಲಸಗಳನ್ನು ಎಂಡಿಎ ವತಿಯಿಂದ ಮಾಡಲಾಗಿದೆ. ನಾನು ಪಾಲಿಕೆ ಸದಸ್ಯನಾಗಿದ್ದ ಸಂದರ್ಭದಲ್ಲಿ ಅರಿವಿಗೆ ಬಂದ ವಿಚಾರಗಳನ್ನು, ಎಂಡಿಎ ಅಧ್ಯಕ್ಷನಾಗಿ ಅಧಿಕಾರ ನೇಮಕವಾದ ಮೇಲೆ ಹಲವು ಅಭಿವೃದ್ಧಿ ಕಾರ್ಯಕ್ರಮ ಕೈಗೊಂಡಿದ್ದು, ಎಂಡಿಎ ವಶದಲ್ಲಿರುವ 18 ಬಡಾವಣೆಗಳನ್ನು ನಗರಪಾಲಿಕೆಗೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ನಲ್ಲಿ ಬಿ.ಎಲ್. ಭೈರಪ್ಪಗೆ ಟಿಕೆಟ್ ನೀಡದೆ ವಂಚಿಸಲಾಗಿದೆ. ಮಾಜಿ ಶಾಸಕರೊಬ್ಬರು ಹಣ ಪಡೆದು ಟಿಕೆಟ್ ಮಾರಾಟ ಮಾಡಿರುವುದಾಗಿ ಭೈರಪ್ಪ ಆರೋಪಿಸಿದ್ದಾರೆ. ಜೆಡಿಎಸ್ ಪಕ್ಷದವರು ಸೀಟು ಕಳೆದುಕೊಳ್ಳುವ ಭಯದಲ್ಲಿ ಇದ್ದಾರೆ ಎಂದದರು.
ಪುರಸಭೆ, ಪಪಂ: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಎಸ್.ಡಿ. ಮಹೇಂದ್ರ ಮಾತನಾಡಿ, ಮೈಸೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪೈಕಿ ನಂಜನಗೂಡು, ಕೆ.ಆರ್. ನಗರ ಪುರಸಭೆ, ಎಚ್.ಡಿ. ಕೋಟೆ ಮತ್ತು ಟಿ. ನರಸೀಪುರ ಪಪಂನಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಇ. ಮಾರುತಿರಾವ್ ಪವಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

