ಮೈಸೂರು

ತರಬೇತಿ

Published On :

ಮೈಸೂರು: ಜ್ಞಾನದೀಪ್ತಿ ಟ್ರಸ್ಟ್ ವತಿಯಿಂದ ಪಿಯು ಸಿಇಟಿ ಮತ್ತು ಎನ್‌ಇಇಟಿ ವಿದ್ಯಾರ್ಥಿಗಳಿಗೆ ತರಬೇತಿ ಆಯೋಜಿಸಿದ್ದು, ತರಬೇತಿ ಅವಧಿಯಲ್ಲಿ ಗಣಿತ, ರಸಾಯನಶಾಸ್ತ್ರ, ಭೌತಶಾಸ್ತ್ರ, ಜೀವಶಾಸ್ತ್ರ ವಿಷಯಗಳ ಬಗ್ಗೆ 30 ದಿನಗಳ ತರಬೇತಿ ನೀಡಲಾಗುವುದು. ಆಸಕ್ತರು ಮಾ.25ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಮಾಹಿತಿಗಾಗಿ ಮೊ. 9611012411 ಸಂಪರ್ಕಿಸಿರಿ.
ಬೇಸಿಗೆ ಶಿಬಿರ
ಜಯಲಕ್ಷ್ಮೀಪುರಂನ ಅಕ್ಷಯ ಫೌಂಡೇಶನ್ ಹಾಗೂ ರಂಗಕಹಳೆ ವಿಶ್ವಮಾನವ ವಿದ್ಯಾರ್ಥಿ ಯುವ ವೇದಿಕೆ ಸಹಯೋಗದಲ್ಲಿ ಏ.10 ರಿಂದ ಮೇ 10 ರವರೆಗೆ ಒಂದು ತಿಂಗಳ ಕಾಲ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಚಿಣ್ಣರಲೋಕ ಮಕ್ಕಳ ಬೇಸಿಗೆ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 9980296464 ಸಂಪರ್ಕಿಸಿರಿ.
ಪಿಎಚ್.ಡಿ ಪದವಿ
ಡಾ.ಎಸ್.ವಿ. ವೆಂಕಟೇಶನ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ ಆರ್. ಗೋವಿಂದರಾಜು ಅವರು ಸಾದರಪಡಿಸಿದ ಮಹಾಪ್ರಬಂಧವನ್ನು ಮೈಸೂರು ವಿವಿ ಅಂಗೀಕರಿಸಿ ಮನೋವಿಜ್ಞಾನ ವಿಷಯಕ್ಕೆ ಪಿಎಚ್.ಡಿ ಪದವಿ ನೀಡಿದೆ.
ಮೂರು ದಿನ ಮಳೆ
ಜಿಲ್ಲೆಯಲ್ಲಿ ಮಾ.20 ರಿಂದ 22 ರವರೆಗೆ ಚದುರಿದಂತೆ ಅಲ್ಲಲ್ಲಿ ತುಂತುರಿನಿಂದ ಕೂಡಿದ ಸಾಧಾರಣ ಮಳೆ ಬರುವ ಸಾಧ್ಯತೆ ಇದೆ ಎಂದು ನಾಗನಹಳ್ಳಿ ಸಾವಯವ ಕೃಷಿ ಸಂಶೋಧನಾ ಕೇಂದ್ರದ ಕ್ಷೇತ್ರಾಧೀಕ್ಷಕ ಡಾ.ಸಿ. ಗೋವಿಂದರಾಜು, ಸಹ ಸಂಶೋಧಕ ಎನ್. ನರೇಂದ್ರಬಾಬು ತಿಳಿಸಿದ್ದಾರೆ. ಈ ಅವಧಿಯಲ್ಲಿ ರೈತರು ಜಾನುವಾರುಗಳನ್ನು ಮಧ್ಯಾಹ್ನ 12 ರಿಂದ ಸಂಜೆ 5 ರವರೆಗೆ ಮೇಯಲು ಬಿಡಬಾರದು. ಸಾಕಷ್ಟು ಪ್ರಮಾಣದಲ್ಲಿ ಕುಡಿಯಲು ನೀರನ್ನು ಪೂರೈಸಬೇಕು. ಹಾಲು ಕರೆಯುವುದಕ್ಕಿಂತ ಮುಂಚಿತವಾಗಿ ಹಸುಗಳ ಮೈಮೇಲೆ ನೀರನ್ನು ಚುಮುಕಿಸಬೇಕು. ಕೊಟ್ಟಿಗೆ ನೆಲ ತಂಪಾಗಿರುವಂತೆ ನೋಡಿಕೊಳ್ಳಬೇಕು. ಟೊಮೆಟೊ ಬೆಳೆಗೆ ಹಣ್ಣು ಕೊರಕ ರೋಗ ತಗುಲಿದ್ದರೆ ಎನ್‌ಪಿವಿ 1 ಮಿ.ಲೀ. ಔಷಧವನ್ನು ಒಂದು ಲೀಟರ್ ನೀರಿನಲ್ಲಿ ಮಿಶ್ರಣ ಮಾಡಿ ಸಿಂಪಡಿಸಬೇಕು ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.