ಆದರ್ಶ ಶಾಲೆ ನಿರ್ಮಾಣಕ್ಕೆ ಚಾಲನೆ
ಕ.ಪ್ರ.ವಾರ್ತೆ ್ಣ ಕೆ.ಆರ್.ನಗರ ್ಣ ಮಾ.19
ಇಲ್ಲಿನ ಆದರ್ಶ ಶಾಲೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಸಾ.ರಾ. ಮಹೇಶ್ ಮಂಗಳವಾರ ಚಾಲನೆ ನೀಡಿದರು.
ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಪಟ್ಟಣದಲ್ಲಿ ಆದರ್ಶ ಶಾಲೆಗೆ ಸೂಕ್ತವಾದ ಮತ್ತು ವಿಶಾಲವಾದ ಜಾಗವಿಲ್ಲದ ಕಾರಣ, ಹೊರವಲಯದಲ್ಲಿ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಇಲ್ಲಿ ಶಾಲಾ ಮತ್ತು ವಸತಿ ಕಟ್ಟಡ ಹಾಗೂ ಸಂಗ್ರಹಾಲಯವನ್ನು ನಿರ್ಮಿಸಲಾಗುತ್ತದೆ ಎಂದರು.
2010ರಲ್ಲಿ ಆದರ್ಶ ಶಾಲೆಯನ್ನು ಮಂಜೂರು ಮಾಡಿಸಿ, ಬೇರೆ ಕಟ್ಟಡದಲ್ಲಿ ತಾತ್ಕಾಲಿಕವಾಗಿ ತರಗತಿಗಳನ್ನು ನಡೆಸಲಾಗುತ್ತಿತ್ತು. ನಂತರ ಶಾಲೆಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ನಿರ್ಧರಿಸಿ ಸರ್ಕಾರದಿಂದ 5 ಕೋಟಿ ಅನುದಾನ ಬಿಡುಗಡೆ ಮಾಡಿಸಿ, ಉತ್ತಮ ಮೂಲ ಸೌಕರ್ಯ ದೊರೆಯುವಂತೆ ಸುಸಜ್ಜಿತವಾದ ಶಾಲೆ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು. ಆದರ್ಶ ಶಾಲೆಯ ಜತೆಗೆ ತಾಲೂಕಿನ ಮುಂಜನಹಳ್ಳಿ ಮತ್ತು ರಾಂಪುರ ಗ್ರಾಮಗಳ್ಳಿ ತಲಾ ಐದು ಕೋಟಿ ವೆಚ್ಚದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಈಗಾಗಲೇ ಅಲ್ಲಿ ತರಗತಿಗಳು ನಡೆಯುತ್ತಿವೆ. ಇದರ ಅನುಕೂಲವನ್ನು ವಿದ್ಯಾರ್ಥಿಗಳು ಪಡೆದುಕೊಂಡು ಉತ್ತಮ ಶಿಕ್ಷಣ ಹೊಂದಬೇಕೆಂದು ಸಲಹೆ ನೀಡಿದರು.
ಪುರಸಭಾ ಸದಸ್ಯರಾದ ಉಮೇಶ್, ಕೆ.ಎಲ್. ಜಗದೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಟಿ. ಜವರೇಗೌಡ ಮಾತನಾಡಿದರು. ತಹಸೀಲ್ದಾರ್ ಆರೋಗ್ಯಮೆರಿ, ಆದರ್ಶ ಶಾಲೆಯ ಪ್ರಾಂಶುಪಾಲ ನಾರಾಯಣಪ್ರಸಾದ್, ಪುರಸಭಾ ಸದಸ್ಯರಾದ ಎನ್. ಶಿವಕುಮಾರ್, ರಾಜಣ್ಣ, ವಿನಯ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

