ಕಾಡು ಹಂದಿ ಬೇಟೆಗಾರರ ಬಂಧನ
ರಾವಂದೂರು: ಪಿರಿಯಾಪಟ್ಟಣ ತಾಲೂಕಿನ ರಾವಂದೂರು ಗ್ರಾಮದ ಅರಣ್ಯ ನಡುತೋಪಿನಲ್ಲಿ ಕಾಡು ಹಂದಿ ಬೇಟೆಯಾಡಿ ಸಾಗಿಸುತ್ತಿದ್ದ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ಬಂಧಿಸಿದ್ದಾರೆ.
ಎರಡು ಬೈಕ್ ಹಾಗೂ 3 ಹಂದಿಗಳ ಕಳೆಬರವನ್ನು ವಶಪಡಿಸಿಕೊಂಡಿದ್ದಾರೆ. ಹಂದಿಗಳನ್ನು ಬಲೆಹಾಕಿ ಹಿಡಿದು ನಂತರ ಈಟಿಯಿಂದ ಚುಚ್ಚಿ ಸಾಯಿಸಲಾಗಿದ್ದು ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ. ಈ ಸಂಬಂಧ ಬೆಟ್ಟದಪುರ ಬಸವೇಶ್ವರ ಕಾಲೋನಿಯ ನಿವಾಸಿಯಾದ ಮಂಜ, ರಮೇಶ್ ಮತ್ತು ಹರದೂರು ಗ್ರಾಮದ ಮೈಲಾರಿ ಎಂಬವರನ್ನು ಬಂಧಿಸಲಾಗಿದೆ. ಡಿಸಿಎಫ್ ವಿಜಯಕುಮಾರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರ್ಎಫ್ಒ ಎಂ.ಎಚ್. ಚಿಣ್ಣಪ್ಪ, ವನಪಾಲಕರಾದ ರಶ್ಮಿ, ಮಲ್ಲಿಕಾರ್ಜುಸ್ವಾಮಿ, ಮಹೇಶ್, ಸುಂದರ್, ಹರೀಶ್, ವಾಹನ ಚಾಲಕ ಬಸವರಾಜು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

