ಮೈಸೂರು

ನಾಳೆ ರಂಗಾಯಣದ ವನರಂಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನ

Published On :

ಕ.ಪ್ರ.ವಾರ್ತೆ ಮೈಸೂರು ಮಾ.19
ಸಮಾನ ಮನಸ್ಕ ಮಹಿಳಾ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮಾ.21 ರಂದು ರಂಗಾಯಣದ ವನರಂಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನ ಏರ್ಪಡಿಸಿದೆ. ಅಂದು 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ರೈತ ನಾಯಕಿ ಸುನಂದಾ ಜಯರಾಂ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಹಾಗೂ ಮೈರಾಡಾ ಕಾವೇರಿ ಪ್ರಾದೇಶಿಕ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕ ವಿಲಿಯಂ ಡಿಸೋಜ ಅಧ್ಯಕ್ಷತೆ ವಹಿಸುವರು ಎಂದು ಶಕ್ತಿಧಾಮದ ಟ್ರಸ್ಟಿ ಎಂ.ಎನ್. ಸುಮನಾ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೈಸೂರಿನ ಒಂಬತ್ತು ಮಹಿಳಾ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಮಹಿಳಾ ದಿನಾಚರಣೆಯ ಇತಿಹಾಸ, ಮಹಿಳೆಯರ ವಿರುದ್ಧ ನಡೆಯುತ್ತಿರುವ ನಾನಾ ರೀತಿಯ ಅಪರಾಧಗಳು, ಹಿಂಸೆ ಮತ್ತು ದೌರ್ಜನ್ಯಗಳು ಇವೇ ಮೊದಲಾದ ವಿಷಯಗಳ ಕುರಿತು ತಜ್ಞರು ಮಾತನಾಡುವರು ಎಂದರು.
ಈ ವರ್ಷದ ಮಹಿಳಾ ದಿನದ ಘೋಷವಾಕ್ಯ ಲಿಂಗ ಸಮಾನತೆ ಕಾರ್ಯಸೂಚಿ ವೇಗ ಪಡೆದುಕೊಳ್ಳುತ್ತದೆ ಎಂಬುದಾಗಿದ್ದು, ಇದಕ್ಕೆ ಪೂರಕವಾಗಿ ಗೀತೆಗಳು, ಬೀದಿ ನಾಟಕ, ಅಭಿನಯಗಳ ರೂಪದಲ್ಲಿ ಅಂದು ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಮೀರಾ ನಾಯಕ್, ಸರಸ್ವತಿ, ಶ್ರೀವಳ್ಳಿ, ರಮೇಶ್, ರತಿರಾವ್ ಹಾಗೂ ಸಂಧ್ಯಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.