ಮೈಸೂರು

ವಿದ್ಯಾರ್ಥಿಗಳು ಉತ್ತಮ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು: ವಿಶ್ವನಾಥ್

Published On :

ಕ.ಪ್ರ.ವಾರ್ತೆ ಮೈಸೂರು ಮಾ.19
ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಂಡಲ್ಲಿ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯವಿದೆ ಎಂದು ರೋಟರಿ ಕ್ಲಬ್ ಆಫ್ ಮೈಸೂರು ಮಿಡ್‌ಟೌನ್ ಅಧ್ಯಕ್ಷ ಆರ್.ಎಸ್. ವಿಶ್ವನಾಥ್ ಹೇಳಿದರು.
ಕುವೆಂಪುನಗರದ ಬಾಸುದೇವ ಸೋಮಾನಿ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸೋಮಾನಿ ಸಂಭ್ರಮ- 2013 ಅಂತರ ಕಾಲೇಜು ಮಟ್ಟದ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಲ್ಲಿರುವಾಗಲೇ ನಾಯಕತ್ವ ಗುಣದ ಅವಶ್ಯಕತೆ ಇದೆ ಎಂದರು.
ಕಳೆದ ಭಾನುವಾರ ನಗರದಲ್ಲಿ ಲೆಟ್ಸ್ ಡು ಇಟ್ ವತಿಯಿಂದ ಹಮ್ಮಿಕೊಂಡಿದ್ದ ನಗರ ಸ್ವಚ್ಛತಾ ಕಾರ್ಯಕ್ರಮದಿಂದ ನಾಗರಿಕರು ಹಲವು ಅಂಶಗಳನ್ನು ಕಲಿತರು. ಸ್ವಚ್ಛ ಮಾಡುವುದು ಎಷ್ಟು ಕಷ್ಟ ಎಂಬುದು ಅರ್ಥವಾಗಿದೆ. ಹಾಗಾಗಿ ಇಂತಹ ಸಾಮಾಜಿಕ ಸೇವಾ ಕಾರ್ಯದಲ್ಲಿ ಭಾಗವಹಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಅಭಿವೃದ್ಧಿ ಹೊಂದಿರುವ ವಿದೇಶಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸ್ವಚ್ಛತೆ ಕಾಪಾಡದಿದ್ದಲ್ಲಿ ದಂಡ ಕಟ್ಟಬೇಕಾಗುತ್ತದೆ. ಆದರೆ, ನಮ್ಮ ದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ಕಡಿಮೆ ಇದೆ ಎಂದು ವಿಷಾದಿಸಿದರು.
ಐಓಇಟಿ ವ್ಯವಸ್ಥಾಪಕ ಟ್ರಸ್ಟಿ ಪುಟ್ಟಸ್ವಾಮಿ, ಪ್ರಾಂಶುಪಾಲ ಪ್ರೊ.ಎಸ್.ಆರ್. ರಮೇಶ್, ಉಪ ಪ್ರಾಂಶುಪಾಲ ಎಂ. ಶಂಕರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.