ಅತಿಥಿ ಉಪನ್ಯಾಸಕರ ಧರಣಿ ಅಂತ್ಯ
ಕ.ಪ್ರ ವಾರ್ತೆ ್ಣ ಮೈಸೂರು ್ಣ ಮಾ.21
ಕಾಲೇಜು ಶಿಕ್ಷಣ ಇಲಾಖೆಯ ಮೈಸೂರು ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ ಎದುರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಧರಣಿಯನ್ನು ಗುರುವಾರ ಸಂಜೆ ಅಂತ್ಯಗೊಳಿಸಿದ್ದಾರೆ.
ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಕೆ ಹಾಗೂ ಗೌರವಧನ ಬಿಡುಗಡೆ ಮಾಡುವಂತೆ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಮೌಖಿಕವಾಗಿ ಆದೇಶ ನೀಡಿರುವುದಾಗಿ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ. ಟಿ.ಎನ್. ಪ್ರಭಾಕರ್ ಅವರು ಭರವಸೆ ನೀಡಿದ ಬಳಿಕ ಅತಿಥಿ ಉಪನ್ಯಾಸಕರು ಧರಣಿ ಹಿಂಪಡೆದರು. ಸಂಘದ ಅಧ್ಯಕ್ಷ ಕೆ. ಪ್ರದೀಪಕುಮಾರ್, ಪದಾಧಿಕಾರಿಗಳಾದ ಆರ್. ರಾಮಣ್ಣ, ಸಿ.ವಿ. ಶ್ರೀನಿವಾಸ, ವೈ.ಸಿ. ಪ್ರಭುಶಂಕರ, ಹನುಮಂತೇಶ್, ಜಿ.ಆರ್. ದಿವ್ಯಾನಂದ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಉಪಾಧ್ಯಕ್ಷ ಡಿ. ನಾಗಾರ್ಜುನ್, ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಯರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

