ಮೈಸೂರು

ರಸ್ತೆ ಡಾಂಬರೀಕರಣಕ್ಕೆ ಒತ್ತಾಯಿಸಿ ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ ಎಚ್.ಡಿ. ಕೋಟೆ ಮಾ.25
ಎಚ್.ಡಿ. ಕೋಟೆಯಿಂದ ಸರಗೂರಿಗೆ ರಸ್ತೆ ಡಾಂಬರೀಕರಣ ಕಾಮಗಾರಿ ಪ್ರಾರಂಭಿಸುವಂತೆ ಒತ್ತಾಯಿಸಿ ತಾಲೂಕಿನ ಪ್ರಗತಿಪರ ಸಂಘಟನೆಗಳು ಪಟ್ಟಣದ ಬಳಿಯ ಆಲೇಶ್ವರಿಕಟ್ಟೆಯ ಬಳಿ ರಸ್ತೆತಡೆ ನಡೆಸಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಸದರಿ ರಸ್ತೆ ತಾಲೂಕಿನ ಶಾಂತಿಪುರ ಗ್ರಾಮದಿಂದ ಸರಗೂರು ತನಕ ಪ್ರಾರಂಭವಾಗಿದ್ದು, ಕಾಮಗಾರಿ ಆರಂಭದಲ್ಲಿಯೇ ನಿಂತು ಹೋಗಿದೆ. ರಸ್ತೆ ಡಾಂಬರೀಕರಣಕ್ಕೆ ಸಲುವಾಗಿ ರಸ್ತೆ ಅಗೆದು, ಮಣ್ಣು ಹಾಕಿ ಸಮತಟ್ಟು ಮಾಡಿ ಕಾಮಗಾರಿ ನಿಲ್ಲಿಸಿದ್ದಾರೆ. ಇದರಿಂದ ದ್ವಿಚಕ್ರ ವಾಹನ ಸವಾರರು ಸೇರಿದಂತೆ ದಿನನಿತ್ಯ ಸಂಚರಿಸುವ ನೂರಾರು ಸಾರ್ವಜನಿಕರು, ಧೂಳಿನ ನಡುವೆ ವಾಹನ ಚಾಲನೆ ಮಾಡಬೇಕಿದ್ದು, ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದೆ.
ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕಣ್ಣು ಮುಚ್ಚಿಕೊಂಡು ಕುಳಿತಿದ್ದು, ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಅತೀವ ತೊಂದರೆಯಾಗಿದೆ. ಧರಣಿ ಮತ್ತು ರಸ್ತೆ ತಡೆ ಸಾಂಕೇತಿಕವಾಗಿದ್ದು, ಶೀಘ್ರದಲ್ಲೆ ಕಾಮಗಾರಿ ಪ್ರಾರಂಭಿಸಿದಿದ್ದರೆ ಇದೆ ಸ್ಥಳದಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಕನ್ನಡ ಸೇನೆಯ ಕುಮಾರ್, ದಸಂಸ ದೊಡ್ಡಸಿದ್ದು, ಸಿಪಿಐಂಎಂಎಲ್ ಚೌಡಹಳ್ಳಿ ಜವರಯ್ಯ, ರವಿಕುಮಾರ್, ಚೆಲುವರಾಜು, ಅನಿಲ್‌ಕುಮಾರ್, ವೆಂಕಟೇಶ್, ಹುಚ್ಚಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.