ಶಿಕ್ಷಣ ಪಡೆಯಲು ಗಿರಿಜನರಿಗೆ ಸಲಹೆ
ಎಚ್.ಡಿ. ಕೋಟೆ: ಆದಿವಾಸಿ ಗಿರಿಜನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಅನೇಕ ಯೋಜನೆ ರೂಪಿಸಿದ್ದು, ಅದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆಯಬೇಕೆಂದು ಪಪಂ ನೂತನ ಸದಸ್ಯ ಎಚ್.ಸಿ. ನರಸಿಂಹಮೂರ್ತಿ ಹೇಳಿದ್ದಾರೆ. ತಾಲೂಕಿನ ಬಸವನಗಿರಿ ಹಾಡಿಯ ಆಶ್ರಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಮತ್ತು ಶಾರದಾ ಪೂಜೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, 2013-14ನೇ ಸಾಲಿನ 7ನೇ ತರಗತಿ ಅತಿ ಹೆಚ್ಚು ಅಂಕ ಪಡೆದ ಮೊದಲ ಮೂರು ವಿದ್ಯಾರ್ಥಿಗಳಿಗೆ ತಲಾ ಐದು, ಮೂರು ಮತ್ತು ಎರಡು ಸಾವಿರ ರು.ಗಳನ್ನು ವೈಯಕ್ತಿಕವಾಗಿ ಕೊಡುವುದಾಗಿ ಘೋಷಿಸಿದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ನಾಗಪ್ಪ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಗಿರಿಜನ ವಿಸ್ತೀರ್ಣಾಧಿಕಾರಿ ಗೋಪಾಲಕೃಷ್ಣಮೂರ್ತಿ, ಗ್ರಾಪಂ ಸದಸ್ಯ ಸ್ವಾಮಿ, ಯಜಮಾನ್ ಬಸವರಾಜು, ಮುಖ್ಯ ಶಿಕ್ಷಕ ಮಹೇಶ್ ಭಾಗವಹಿಸಿದ್ದರು.
ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು
ಸಾಲಿಗ್ರಾಮ: ಕೆ.ಆರ್. ನಗರ ತಾಲೂಕಿನ ದಡದಹಳ್ಳಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದರಿಂದ ಜನತೆ ಭಯಭೀತರಾಗಿದ್ದಾರೆ. ಗ್ರಾಮದ ಜಗದೀಶ್ ಮತ್ತು ರಮೇಶ್ ಸಾಲಿಗ್ರಾಮದಿಂದ ತಮ್ಮ ಸ್ವಗ್ರಾಮಕ್ಕೆ ಬೈಕ್ನಲ್ಲಿ ಹೋಗುವಾಗ ಪ್ರತ್ಯಕ್ಷವಾಗಿ ಕಾಣಿಸಿಕೊಂಡು, ಪೊದೆಯ ಒಳಗಡೆ ಸೇರಿಕೊಂಡಿತು. ವಿಷಯ ತಿಳಿದ ಸುತ್ತಮುತ್ತಲಿನ ಗ್ರಾಮಸ್ಥರು ತಿರುಗಾಡಲು ಭಯಪಡುತ್ತಿದ್ದಾರೆ. ಅರಣ್ಯ ಇಲಾಖೆಯವರು ಚಿರತೆ ಸೆರೆ ಹಿಡಿಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

