ಶ್ರೀರಾಮುಲು ಮೇಲೆ ಅಧಿಕಾರಿಗಳ ದೌರ್ಜನ್ಯ: ಖಂಡನೆ
ಕ.ಪ್ರ. ವಾರ್ತೆ ಪಿರಿಯಾಪಟ್ಟಣ ಮಾ.24
ಬಳ್ಳಾರಿಯಲ್ಲಿ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸ್ಥಾಪಕ ಶ್ರೀರಾಮುಲು ಅವರ ಮೇಲೆ ಅಧಿಕಾರಿಗಳು ನಡೆಸಿದ ದೌರ್ಜನ್ಯ ನೋಡಿದರೆ ರಾಜ್ಯದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೊ, ಇಲ್ಲವೋ ಎಂಬುದು ಅನುಮಾನ ಮೂಡುತ್ತಿದೆ ಎಂದು ಬಿಎಸ್ಆರ್ ಕಾಂಗ್ರೆಸ್ ಪಕ್ಷದ ತಾಲೂಕು ಮುಖಂಡ ಟಿ.ಡಿ. ಗಣೇಶ್ ಕಿಡಿಕಾರಿದರು. ಶ್ರೀರಾಮುಲು ಅವರು ಬಡವರ ಪರ ಹೋರಾಟ ನಡೆಸುತಿದ್ದ ಸಂದರ್ಭದಲ್ಲಿ ಅವರ ಬಟ್ಟೆ ಹರಿಯುವಂತೆ ಎಳೆದಾಡಿ ಬಂಧಿಸುವ ಮೂಲಕ ಅಲ್ಲಿನ ಅಧಿಕಾರಿಗಳು ಸರ್ವಾಧಿಕಾರಿಗಳಂತೆ ಮೆರೆದಿದ್ದಾರೆ. ಇದು ಸರಿಯಲ್ಲ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಖಂಡಿಸಿದರು. ಬಳ್ಳಾರಿ ಜಿಲ್ಲಾಧಿಕಾರಿ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು. ಇದೇ ರೀತಿ ದೌರ್ಜನ್ಯ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಪಕ್ಷದ ತಾಲೂಕು ಅಧ್ಯಕ್ಷ ರಹಮತ್ ಜಾನ್ ಬಾಬು, ಮುಖಂಡರಾದ ಮಜರ್ ಪಾಷ, ಯೋಗೇಶ್, ಚಲುವನಾಯಕ, ಸುಬ್ರಹ್ಮಣ್ಯ, ಉತ್ತಯ್ಯ, ಸೋಮಣ್ಣ, ರತ್ನಮ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

