ಹೊಸ ಮರಳು ನೀತಿಗೆ ಟಿಪ್ಪರ್ ಮಾಲೀಕರ ಆಕ್ರೋಶ
ಕ.ಪ್ರ.ವಾರ್ತೆ ಮೈಸೂರು ಮಾ.25
ಹೊಸ ಮರಳು ನೀತಿ ಜಾರಿಗೊಳಿಸಿರುವ ಜಿಲ್ಲಾಡಳಿತದ ವಿರುದ್ಧ ಮೈಸೂರು ಜಿಲ್ಲಾ ಟಿಪ್ಪರ್ ಮಾಲೀಕರ ಸಂಘದವರು ಲೋಕೋಪಯೋಗಿ ಇಲಾಖೆಯ ಕಚೇರಿ ಎದುರು ಸೋಮವಾರ ಪ್ರತಿಭಟಿಸಿದರು.
ಮರಳು ಸಾಗಿಸಲು ಟಿಪ್ಪರ್ಗಳಿಗೆ ಅನುಮತಿ ನೀಡದಿರುವ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಾಮದಾಸ್ ಅವರ ಧೋರಣೆ ಖಂಡಿಸಿ ಟಿಪ್ಪರ್ ಮಾಲೀಕರು ಭಾನುವಾರ ಬೆಳಗಿನ ಜಾವದಿಂದಲೇ ಮುಷ್ಕರ ಆರಂಭಿಸಿದ್ದಾರೆ. 2ನೇ ದಿನವಾದ ಸೋಮವಾರ ಸಹ ತಮ್ಮ ಮುಷ್ಕರ ಮುಂದುವರಿಸಿದ್ದಾರೆ.
ಟಿಪ್ಪರ್ಗಳಲ್ಲಿ ಮರಳು ಸಾಗಾಣಿಕೆ ಮಾಡದಂತೆ ಹೊರಡಿಸಿರುವ ಆದೇಶವನ್ನು ತಕ್ಷಣವೇ ಹಿಂಪಡೆದು, ಟಿಪ್ಪರ್ಗಳಲ್ಲಿ ಮರಳು ಸಾಗಾಣಿಕೆಗೆ ಅವಕಾಶ ಕಲ್ಪಿಸಿಕೊಡಬೇಕು. ಭಾನುವಾರ ಹೊರತುಪಡಿಸಿ ಪ್ರತಿದಿನ ಒಂದು ಟಿಪ್ಪರ್ಗೆ 2 ಪರ್ಮಿಟ್ ನೀಡಬೇಕು. ಇತರೆ ಜಿಲ್ಲೆಗಳಲ್ಲಿ ಜಾರಿಯಲ್ಲಿರುವಂತೆ 8 ಕ್ಯುಬಿಕ್ ಮರಳು ಸಾಗಾಣಿಕೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಕೃಷ್ಣಮೂರ್ತಿ ಮನವಿ ಸ್ವೀಕರಿಸಿದರು.
ಸಂಘದ ಅಧ್ಯಕ್ಷ ಕೆ. ಅರುಣ್ಕುಮಾರ್, ಪ್ರಧಾನ ಕಾರ್ಯದರ್ಶಿ ಕೆ.ಪಿ. ಪ್ರಸನ್ನಕುಮಾರ್, ಎ.ಜಿ. ಮುರಳಿಧರ್, ಎಸ್.ಬಿ. ಸುರೇಶ್, ಡಿ.ವಿ. ರಮೇಶ್, ಜಗದೀಶ್, ಮುಖಂಡರಾದ ಸುಗಂದರಾಜು, ಶಿವಕುಮಾರ್, ಪರಶಿವಮೂರ್ತಿ, ಬಿ. ರೇವಣ್ಣ ಇತರರು ಇದ್ದರು.
ನಾಳೆ ಟಿಪ್ಪರ್ ಮೆರವಣಿಗೆ: ಮೈಸೂರು ಜಿಲ್ಲಾ ಟಿಪ್ಪರ್ ಮಾಲೀಕರ ಸಂಘದ ವತಿಯಿಂದ ಮಾ. 27ರ ಬೆಳಗ್ಗೆ 11ಕ್ಕೆ ನ್ಯಾಯಾಲಯದ ಎದುರಿನಿಂದ ಕುವೆಂಪುನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಚೇರಿವರೆಗೆ ಟಿಪ್ಪರ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಕಾರ್ಯದರ್ಶಿ ಕೆ.ಪಿ. ಪ್ರಸನ್ನಕುಮಾರ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

