ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ
ಮೈಸೂರು: ಐಡಿಬಿಐ ಬ್ಯಾಂಕ್ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಮುಂಜಾನೆ ಮೈಸೂರಿನಲ್ಲಿ ನಡೆದಿದೆ. ರಾಮಕೃಷ್ಣನಗರ ಇ ಆ್ಯಂಡ್ ಎಫ್ ಬ್ಲಾಕ್ ನಿವಾಸಿ ಕೇಶವ್ (35) ಆತ್ಮಹತ್ಯೆ ಮಾಡಿಕೊಂಡವರು. ಮೂಲತಃ ಹಾಸನ ಜಿಲ್ಲೆ ಬೇಲೂರಿನವರಾದ ಕೇಶವ್, ಸರಸ್ವತಿಪುರಂನಲ್ಲಿರುವ ಐಡಿಬಿಐ ಬ್ಯಾಂಕಿನಲ್ಲಿ ಕಳೆದ ಮೂರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ಇವರ ಪತ್ನಿ ನಾಗಶ್ರೀ ಮಂಗಳವಾರ ಬೆಳಗ್ಗೆ 6ಕ್ಕೆ ವಾಯುವಿಹಾರಕ್ಕೆ ತೆರಳಿದ್ದರು. ಪ್ರತಿದಿನ ಪತ್ನಿಯೊಂದಿಗೆ ವಾಯುವಿಹಾರಕ್ಕೆ ಹೋಗುತ್ತಿದ್ದ ಕೇಶವ್, ಅನಾರೋಗ್ಯ ನೆಪವೊಡ್ಡಿ ಮನೆಯಲ್ಲಿ ಉಳಿದುಕೊಂಡಿದ್ದರು. ನಾಗಶ್ರೀ ಅವರು ವಾಯುವಿಹಾರ ಮುಗಿಸಿ ಬೆಳಗ್ಗೆ 6.45ಕ್ಕೆ ಮನೆಗೆ ಬಂದಾಗ ಬಾಗಿಲು ಲಾಕ್ ಆಗಿತ್ತು. ಕಿಟಕಿಯಲ್ಲಿ ನೋಡಿದಾಗ ಕೇಶವ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿತು. ಕೇಶವ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಕೆ.ಎನ್. ಯಶವಂತ್ಕುಮಾರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

