ಕ.ಪ್ರ.ವಾರ್ತೆ ್ಣ ಮೈಸೂರು ್ಣ ಮಾ.29
ಚಾಮರಾಜ ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಎನ್. ಅರುಣ್‌ಗೌಡ ಶುಕ್ರವಾರ ಚುನಾವಣಾ ಪ್ರಚಾರ ಕಾರ್ಯ ಆರಂಭಿಸಿದರು. ಒಂಟಿಕೊಪ್ಪಲಿನ ಶ್ರೀ ಲಕ್ಷ್ಮಿವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು, ಅಲ್ಲಿಂದ ಸಮೀಪದಲ್ಲಿರುವ ರೇಲ್ವೆ ಕಾಲೋನಿಗೆ ಪಾದಯಾತ್ರೆಯ ಮೂಲಕ ತೆರಳಿ ಮತಯಾಚಿದರು. ನಂತರ ಮಂಜುನಾಥಪುರದಲ್ಲಿಯೂ ಮನೆ ಮನೆಗೆ ತೆರಳಿ ಚುನಾವಣಾ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಕೆಜೆಪಿ ಜಿಲ್ಲಾ ಉಸ್ತುವಾರಿ ಎನ್.ವಿ. ಫಣೀಶ್, ಮಹಿಳಾ ಘಟಕದ ನಗರಾಧ್ಯಕ್ಷೆ ವೀಣಾ, ಚಾಮರಾಜ ಕ್ಷೇತ್ರದ ಅಧ್ಯಕ್ಷ ಪ್ರಶಾಂತ್, ಉಪಾಧ್ಯಕ್ಷ ಕಿರಣ್ ಮುಂತಾದವರು ಇದ್ದರು.