ರಾಮದಾಸ್ ಷಡ್ಯಂತ್ರದಿಂದ ಸೋಲು: ಆರೋಪ

Updated on: 

ಕ.ಪ್ರ.ವಾರ್ತೆ ್ಣ ಮೈಸೂರು ್ಣ ಮಾ.30
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರಾಮದಾಸ್ ಷಡ್ಯಂತ್ರದಿಂದ ತಾವು ನಗರಪಾಲಿಕೆ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಪಾಲಿಕೆ ಬಿಜೆಪಿ ಮಾಜಿ ಸದಸ್ಯ ಎಂ.ಡಿ. ಪಾರ್ಥಸಾರಥಿ ಆರೋಪಿಸಿದರು.
ಕಳೆದ 25 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದು, 2002 ಮತ್ತು 2007 ರಲ್ಲಿ 4ನೇ ವಾರ್ಡ್‌ನಿಂದ ಸ್ಪರ್ಧಿಸಿದ್ದ ನಮಗೆ ಜನತೆ ಅತ್ಯಧಿಕ ಮತ ನೀಡಿ ಗೆಲ್ಲಿಸಿದ್ದರು. ಅಂತೆಯೇ ವಾರ್ಡ್‌ನ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಈ ಬಾರಿ ನಾನು ಕೇವಲ 2 ಮತಗಳ ಅಂತರದಿಂದ ಸೋಲಬೇಕಾಯಿತು. ನನ್ನ ರಾಜಕೀಯ ಬೆಳವಣಿಗೆ ಸಹಿಸದೆ ಬಿ ಫಾರಂ ನೀಡುವ ಮೂಲಕ ರಾಮದಾಸ್ ಅವರು ಸೋಲಿಸುವಲ್ಲಿ ಪ್ರಮುಖ ಕಾರಣರಾಗಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.  

ಆಯೋಗ ವಿರುದ್ಧ ಮೊಕದ್ದಮೆ: ನಾನು ಸ್ಪರ್ಧಿಸಿದ್ದ 4 ನೇ ವಾರ್ಡ್‌ನ ಶೇ. 25- 30 ರಷ್ಟು ಮತದಾರರ ಹೆಸರು ಮತಪಟ್ಟಿಯಲ್ಲಿ ನಾಪತ್ತೆಯಾಗಿತ್ತು. ಅಲ್ಲದೆ, 250 ಕ್ಕೂ ಹೆಚ್ಚಿನ ಮತದಾರರ ಹೆಸರು ಬೇರೆ ವಾರ್ಡ್‌ಗೆ ವರ್ಗಾಯಿಸಲಾಗಿತ್ತು. ಈ ಲೋಪ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗದ ವಿರುದ್ಧ ಮೊಕದ್ದಮೆ ದಾಖಲು ಮಾಡುವುದಾಗಿ ತಿಳಿಸಿದರು.  
ಬಂಡಾಯ ಸ್ಪರ್ಧೆ: ಕೃಷ್ಣರಾಜ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಲು ಟಿಕೆಟ್ ಕೋರಿ ಈಗಾಗಲೇ ಬಿಜೆಪಿ ವರಿಷ್ಠರಿಗೆ ಮನವಿ ಮಾಡಲಾಗಿದೆ. ಎಸ್.ಎ. ರಾಮದಾಸ್ ಅವರಿಗೆ ಟಿಕೆಟ್ ಎಂದು ಹೇಳಿದ್ದರೂ ನಾಮಪತ್ರ ಸಲ್ಲಿಸುವವರಗೆ ಯಾವುದೇ ಬದಲಾವಣೆ ಮಾಡಲು ಅವಕಾಶವಿದೆ. ಒಂದು ವೇಳೆ ಟಿಕೆಟ್ ನೀಡದಿದ್ದರೆ, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಆಲೋಚನೆಯಿದೆ ಎಂದರು.
ಏ. 2 ರಂದು ಖಿಲ್ಲೆ ಮೊಹಲ್ಲಾದ ನಟರಾಜ ಕಲ್ಯಾಣ ಮಂಟಪದಲ್ಲಿ ಆಪ್ತರೊಡನೆ ಸಮಾಲೋಚನಾ ಸಭೆ ಏರ್ಪಡಿಸಿದ್ದು, ಆ ನಂತರ ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು. ಮುಖಂಡರಾದ ಸುರೇಶ್, ದೀಪಕ್, ಬಸವರಾಜು ಹಾಗೂ ರವಿ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com