ಕ.ಪ್ರ.ವಾರ್ತೆ ್ಣ ಮೈಸೂರು ್ಣ ಮಾ.30
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಸರ್ಕಾರಿ ಪದವಿ ಕಾಲೇಜಿನ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಸೋನಂ ಎಂಬವರನ್ನು ಚಾಕುವಿನಿಂದ ಇರಿದು ಕೊಂದಿರುವ ಘಟನೆಯನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ತೀವ್ರವಾಗಿ ಖಂಡಿಸಿದೆ.
ಅಭಿಷೇಕ್ ಎಂಬಾತ ತನ್ನನ್ನು ಪ್ರೀತಿಸಲು ನಿರಾಕರಿಸಿದ್ದಕ್ಕಾಗಿ ವಿದ್ಯಾರ್ಥಿನಿಯನ್ನು ಕೊಲೆಗೈದಿರುವುದು ಸಮಾಜಕ್ಕೆ ಕಪ್ಪು ಚುಕ್ಕೆಯಾಗಿದೆ. ಸೋನಂ ಅವರ ಕೊಲೆ ಸಾರ್ವಜನಿಕರೆದುರೇ ನಡೆದಿದ್ದು, ಸಾಕ್ಷಿಗಳು ಸಾಕಷ್ಟು ಲಭ್ಯವಿರುವುದರಿಂದ ಅಪರಾಧಿ ಅಭಿಷೇಕ್‌ಗೆ ಅತ್ಯಂತ ಕಠಿಣ ಶಿಕ್ಷೆಯನ್ನು ಅತಿ ಶೀಘ್ರವಾಗಿ ವಿಧಿಸಲೇಬೇಕು ಎಂದು ಎಐಎಂಎಸ್‌ಎಸ್ ಕಾರ್ಯದರ್ಶಿ ಪಿ.ಎಸ್. ಸಂಧ್ಯಾ ಒತ್ತಾಯಿಸಿದ್ದಾರೆ.