ಮೈಸೂರು

ಅಂಬೇಡ್ಕರ್ಗೆ ಅಪಮಾನ: ಗಡಿಪಾರಿಗೆ ಆಗ್ರಹ

Published On :

ಕ.ಪ್ರ.ವಾರ್ತೆ  ಟಿ.ನರಸೀಪುರ  ಮೇ 10
ಊಟದ ತಟ್ಟೆಗಳಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಮುದ್ರಿಸಿ, ಸಾರ್ವಜನಿಕರ ಬಳಕೆಗೆ ನೀಡಿ ಅಪಮಾನಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ರಾಜಕೀಯ ಪಕ್ಷಗಳ ಮುಖಂಡರನ್ನು ಗಡಿಪಾರು ಮಾಡಬೇಕು ಎಂದು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಶಿವಕುಮಾರ್ ಆಗ್ರಹಿಸಿದರು.
ಹುಣಸೂರು ತಾಲೂಕಿನ ಚಿಲ್ಕುಂದ ಹಾಗೂ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಹಾಕಲಾಗಿದ್ದ ಊಟದ ತಟ್ಟೆಗಳನ್ನು ಬಳಸಿ ಬೀಸಾಡುವ ಮೂಲಕ ಅವರಿಗೆ ಅಪಮಾನ ಮಾಡಲಾಗಿದೆ.
ಸರ್ಕಾರ ಹಾಗೂ ಜಿಲ್ಲಾಡಳಿತ ಯಾವುದೇ ಕಠಿಣ ಕ್ರಮವನ್ನು ಕೈಗೊಳ್ಳದ್ದರಿಂದ, ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮಾರಾಟಗಾರರು ಹಾಗೂ ಸಾರ್ವಜನಿಕರ ಬಳಕೆಗೆ ನೀಡಿದ ರಾಜಕಾರಣಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ಗಡಿಪಾರು ಮಾಡಬೇಕು. ಇಲ್ಲದಿದ್ದರೆ ದಸಂಸ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ದಸಂಸ ತಾಲೂಕು ಸಂಚಾಲಕ ರಾಜು, ಸಂಘಟನಾ ಸಂಚಾಲಕ ಮಹದೇವಯ್ಯ, ಮುಖಂಡ ಶಿವಣ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.