ಮೈಸೂರು

ಕಾಂಗ್ರೆಸ್ನಿಂದ ಮಾತ್ರ ಅಲ್ಪಸಂಖ್ಯಾತರ ಕಲ್ಯಾಣ

Published On :


ಕ.ಪ್ರ.ವಾರ್ತೆ  ಟಿ.ನರಸೀಪುರ  ಮೇ 10
ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ನಿಂದ ಮಾತ್ರ ಸಾಧ್ಯವೆಂದು ಮುಸ್ಲಿಂ ಸಮುದಾಯದ ಮುಖಂಡ ಮಹಮದ್ ಹುಸೇನ್ ಹೇಳಿದರು.
ಇಲ್ಲಿನ ಲಿಂಕ್ ರಸ್ತೆಯಲ್ಲಿ ನಡೆದ ಮುಸ್ಲಿಂ ಸಮುದಾಯದ ಮುಖಂಡರ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಏಳು ವರ್ಷಗಳ ನಂತರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿರುವುದರಿಂದ ಮುಸ್ಲಿಂ ಸಮುದಾಯದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಯೋಜನೆಗಳು ಜಾರಿಯಾಗಲಿವೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷವು ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಹುದ್ದೆ ಆಯ್ಕೆ ಮಾಡಿರುವುದು, ಕಲ್ಯಾಣ ಕರ್ನಾಟಕ ನಿರ್ಮಾಣಕ್ಕಾಗಿ ದುಡಿಯುವ ಅವಕಾಶವನ್ನು ಪಕ್ಷದ ವರಿಷ್ಠರು ಕಲ್ಪಿಸಿಕೊಟ್ಟಿರುವುದು ವರುಣ ಕ್ಷೇತ್ರದ ಜನತೆಗೆ ಹಮ್ಮೆಯ ವಿಷಯವಾಗಿದೆ. ಈ ಮೂಲಕ ಮೈಸೂರು ಜಿಲ್ಲೆ ಸೇರಿದಂತೆ ಅಖಂಡ ಕರ್ನಾಟಕ ಸಮಗ್ರವಾಗಿ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು. ಕನ್ನಡ ಸೇನೆ ಕರ್ನಾಟಕ ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿ, ವರುಣ ಹಾಗೂ ಟಿ.ನರಸೀಪುರ ಕ್ಷೇತ್ರದ ವ್ಯಾಪ್ತಿಗೆ ಬರುವ ಸುಶೀಲಮ್ಮ ಕಾಲೋನಿ ಹಾಗೂ ಇಂದಿರಾ ಕಾಲೋನಿಯ ಸಾವಿರಾರು ಮುಸ್ಲಿಮರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಅವರಂತಹ ಇಬ್ಬರೂ ನಾಯಕರನ್ನು ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.
ಸಭೆಯಲ್ಲಿ ಜಾಮೀಯಾ ಮಸೀದಿ ಧರ್ಮಗುರು ಕೌಷರ್ಪಾಷ, ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಕಾರ್ಯದರ್ಶಿ ಬಿ. ಮನ್ಸೂರ್ ಆಲಿ, ಪಪಂ ಸದಸ್ಯ ಟಿ.ಜಿ. ಪುಟ್ಟಸ್ವಾಮಿ, ಮುಖಂಡರಾದ ಮುಜ್ಜು, ಜಬಿವುಲ್ಲಾ, ಅಮಾಹುಸೇನ್, ಅನ್ವರ್ಪಾಷ, ನೂರಿ ಪಾಷ, ನವೀದ್, ಸಮೀರ್ಖಾನ್, ಏಜಿಯಾಸ್ ಪಾಷ, ಕನ್ನಡಸೇನೆ ತಾಲೂಕು ಅಧ್ಯಕ್ಷ ಅಗಸ್ತೇಗೌಡ, ಎಲ್ಐಸಿ ರಾಜಣ್ಣ, ನಾರಾಯಣ, ನಯನಜ ಕ್ಷತ್ರೀಯ ಸಂಘದ ಅಧ್ಯಕ್ಷ ನಾಗೇಂದ್ರ, ಖಜಾಂಚಿ ನಾಗರಾಜು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.