ಮೈಸೂರು

ನಂಜನಗೂಡಿನಲ್ಲಿ ಕಾಂಗ್ರೆಸ್ ಸಂಭ್ರಮ

Published On :

ಕ.ಪ್ರ.ವಾರ್ತೆ  ನಂಜನಗೂಡು  ಮೇ 10
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರು ಘೋಷಣೆಯಾಗುತ್ತಿದ್ದಂತೆಯೇ ನಂಜನಗೂಡಿನ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.
ಬೆಳಗ್ಗಿನಿಂದಲೂ ಕುತೂಹಲದಿಂದ ಕಾಯುತ್ತಿದ್ದ ಅಭಿಮಾನಿಗಳು, ಬೆಂಬಲಿಗರು ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಪಟಾಕಿ ಸಿಡಿಸಿ ಸಿಹಿಹಂಚಿ ಸಂತಸ ಹಂಚಿಕೊಂಡರು. ಪುರಸಭೆ ಮಾಜಿ ಅಧ್ಯಕ್ಷ ಸಿ.ಎಂ. ಶಂಕರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹುಲ್ಲಹಳ್ಳಿ ವೃತ್ತದಲ್ಲಿ ಸಮಾವೇಶಗೊಂಡು ಸಿದ್ದರಾಮಯ್ಯ ಹಾಗೂ ಶಾಸಕ ವಿ. ಶ್ರೀನಿವಾಸಪ್ರಸಾದ್ ಪರ ಜಯಕಾರ ಹಾಕಿ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿದರು. ಕಾಂಗ್ರೆಸ್ ಉಪಾಧ್ಯಕ್ಷ ಜಿ. ಪ್ರಸಾದ್, ಉದ್ಯಮಿ ಕೃಷ್ಣಪ್ಪ, ಮಲ್ಲಿಕಾರ್ಜುನಸ್ವಾಮಿ, ಎನ್.ಎಸ್. ಮಹದೇವು, ಹುಂಡಿ ನಾಗರಾಜು, ಶ್ರೀಕಂಠ  ಇದ್ದರು.  ವಿಶ್ವಕರ್ಮ ಜನಾಂಗದ ಜಿಲ್ಲಾಧ್ಯಕ್ಷ ಎನ್. ನಂದಕುಮಾರ್ ನೇತೃತ್ವದಲ್ಲಿ ಕಾರ್ಯಕರ್ತರ ಮಂದು ಗುಂಪು ಹುಲ್ಲಹಳ್ಳಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಪ್ರಮುಖ ರಸ್ತೆಗಳಲ್ಲಿ ಬೈಕ್ರ್ಯಾಲಿ ನಡೆಸಿ ಎಲ್ಲರ ಗಮನ ಸೆಳೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.