ಮೈಸೂರು

ಪಿರಿಯಾಪಟ್ಟಣಕ್ಕೆ ಮಾತ್ರ ನೀತಿ ಸಂಹಿತೆ ಅನ್ವಯ: ಡಿಸಿ ಶಿಖಾ

Published On :

ಮೇ 28 ರಂದು ನಡೆಯಲಿರುವ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಆ ಪ್ರದೇಶಕ್ಕೆ ಮಾತ್ರ ನೀತಿ ಸಂಹಿತೆ ಅನ್ವಯಿಸುತ್ತದೆ. ಮಾದರಿ ನೀತಿ ಸಂಹಿತೆ ಜೂ. 3 ರವರೆಗೂ ಜಾರಿಯಲ್ಲಿರುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ ಎಂದು ಜಿಲ್ಲಾಧಿಕಾರಿ ಸಿ. ಶಿಖಾ ತಿಳಿಸಿದ್ದಾರೆ.
ಬೈಕ್‌ಗೆ ಬಸ್ ಡಿಕ್ಕಿ ಸವಾರ ತೀವ್ರ ಗಾಯ
ಹುಣಸೂರು: ಸಾರಿಗೆ ಸಂಸ್ಥೆಯ ಬಸ್ ಮತ್ತು ಮೋಟಾರ್‌ಸೈಕಲ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ತೀವ್ರ ಗಾಯ್ಗೊಂಡ ಘಟನೆ ಹನಗೋಡು ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ಜರುಗಿದೆ. ಹನಗೋಡಿನ ಸಮೀಪದ ಕಚುವಿನಹಳ್ಳಿ ಗ್ರಾಮದ ಗ್ರಾಪಂ ಸದಸ್ಯ ಶಿವಸ್ವಾಮಿ ಗಾಯಗೊಂಡ ವ್ಯಕ್ತಿ. ಇವರ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್‌ಐ ಅರುಣ್ ತಿಳಿಸಿದ್ದಾರೆ.
ನಕಲಿ ದಂತ ಮಾರಾಟ  ಇಬ್ಬರ ಬಂಧನ
ಹುಣಸೂರು: ತಾಲೂಕಿನ ಎಚ್.ಡಿ. ಕೋಟೆ ರಸ್ತೆಯ ಹೊಸೂರು ಗೇಟ್ ಬಳಿ ನಕಲಿ ಆನೆ ದಂತ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ಬಂಧಿಸಿದ್ದಾರೆ. ಇಲ್ಲಿನ ಶಬ್ಬೀರ್‌ನಗರದ ಅಫ್ಸರ್ ಹಾಗೂ ಪಕ್ಷಿರಾಜಪುರದ ವಸಂತ ಬಂಧಿತ ಆರೋಪಿಗಳು. ಈತನೊಂದಿಗಿದ್ದ ಗಣೇಶ ಕಾರ್ಯಾಚರಣೆ ವೇಳೆ ತಪ್ಪಿಸಿಕೊಂಡಿದ್ದಾನೆ. ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿರುವ ಆರು ನಕಲಿ ದಂತದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು  ಎಸ್‌ಐ ಅರುಣ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.