ದಲಿತರಿಗೆ ಸಿಎಂ ಸ್ಥಾನಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಕ.ಪ್ರ.ವಾರ್ತೆ ಮೈಸೂರು ಮೇ 12
ಕಾಂಗ್ರೆಸ್ ಹೈಕಮಾಂಡ್ ದಲಿತ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ದಲಿತ ವಿದ್ಯಾರ್ಥಿ ಒಕ್ಕೂಟದವರು ಶನಿವಾರ ಪ್ರತಿಭಟನೆ ನಡೆಸಿದರು.
ಮಾನಸಗಂಗೋತ್ರಿಯಿಂದ ರಾಮಸ್ವಾಮಿ ವೃತ್ತದವರೆಗೆ ನೂರಾರು ವಿದ್ಯಾರ್ಥಿಗಳು ಮೆರವಣಿಗೆ ಹಮ್ಮಿಕೊಂಡಿದ್ದರು. ನಂತರ ರಾಮಸ್ವಾಮಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಅವರನ್ನು ಕಾಂಗ್ರೆಸ್ ಮುಖಂಡರೆ ಸೋಲಿಸಿದ್ದಾರೆ. ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿರುವ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡದೆ ವಂಚಿಸಲಾಗಿದೆ ಎಂದು ಅವರು ಆರೋಪಿಸಿದರು.
ಈ ಕೂಡಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ದಲಿತ ನಾಯಕರಿಗೆ ನೀಡಬೇಕು. ಇಲ್ಲವೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಲಿತ ಸಮುದಾಯದ ಶಕ್ತಿ ಎನೆಂಬುದನ್ನು ತೋರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಒಕ್ಕೂಟದ ಅಧ್ಯಕ್ಷ ಎಂ.ಜಿ. ಮನೋಜ್‌ಕುಮಾರ್, ಮುಖಂಡರಾದ ರಾಮ್‌ಶೇಖರ್, ನಾಗರಾಜ, ನಾಗೇಂದ್ರ, ರೇವಣ್ಣ, ರವಿಪ್ರಸಾದ್, ರಾಮರಾಜ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

