ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಪಟ್ಟಕ್ಕೆ ಆಗ್ರಹಿಸಿ ಉರುಳುಸೇವೆ
ಮೈಸೂರು: ಕೇಂದ್ರ ಸಚಿವ ಎಂ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳ ಸಂಘದಿಂದ ಶನಿವಾರ ಮೈಸೂರಿನಲ್ಲಿ ವಿಶೇಷ ಪೂಜೆ ಹಾಗೂ ಉರುಳುಸೇವೆ ನಡೆಸಲಾಯಿತು. ಕೋಟೆ ಆಂಜನೇಯಸ್ವಾಮಿ ಹಾಗೂ ಗಣಪತಿ ದೇವಸ್ಥಾನಗಳಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಉರುಳು ಸೇವೆ ಮಾಡಲಾಯಿತು. ಸೋಲಿಲ್ಲದ ಸರದಾರ, ಹಿರಿಯ ರಾಜಕೀಯ ಮುತ್ಸದ್ಧಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಎಂದು ಘೋಷಿಸಬೇಕು. ಈ ಹಿಂದೆ ಬಿ. ಬಸವಲಿಂಗಪ್ಪ, ಟಿ.ಎನ್. ನರಸಿಂಹಮೂರ್ತಿ, ಎನ್. ರಾಚಯ್ಯ, ಬಿ. ರಾಚಯ್ಯ, ಕೆ.ಎಚ್. ರಂಗನಾಥ್ ಅವರಿಗೆ ಸಿಎಂ ಪಟ್ಟ ನೀಡದೆ ವಂಚಿಸಲಾಗಿದೆ. ಆದ್ದರಿಂದ ಈ ಬಾರಿಯಾದರು ಖರ್ಗೆಗೆ ಸಿಎಂ ಸ್ಥಾನ ನೀಡಬೇಕು ಎಂದು ಅಭಿಮಾನಿಗಳು ಒತ್ತಾಯಿಸಿದರು. ಜಿಲ್ಲಾಧ್ಯಕ್ಷ ಪ್ರಭು, ನಗರಾಧ್ಯಕ್ಷ ಪಡುವಾರಳ್ಳಿ ಮೋಹನ್, ಯುವ ಘಟಕದ ಅಧ್ಯಕ್ಷ ಬೆಟ್ಟದೂರು ಕಾಂತ, ಎಸ್ಟಿ ಘಟಕದ ಅಧ್ಯಕ್ಷ ಸಿದ್ದನಾಯಕ, ತಾಲೂಕು ಅಧ್ಯಕ್ಷ ಎಸ್. ವಿಜಯಕುಮಾರ್, ಮುಖಂಡರಾದ ಸೂರಜ್, ಮಾವಿನಹಳ್ಳಿ ರವಿ, ಚಾಮರಾಜ್, ಸ್ವಾಮಿ, ಕೃಷ್ಣಮೂರ್ತಿ, ನಿಂಗರಾಜ್, ಬಾಲರಾಜ್, ಮಹದೇವ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

