ಮೈಸೂರು

ಮುಂದಿನ ಕಂತಿನಲ್ಲಾದರು ಖರ್ಗೆ ಸಿಎಂ ಮಾಡಿ

Published On :

ಕ.ಪ್ರ.ವಾರ್ತೆ   ಮೈಸೂರು   ಮೇ 12
ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ದಲಿತರು ಕಾಂಗ್ರೆಸ್ ಬೆಂಬಲಿಸಿಕೊಂಡು ಬಂದಿದ್ದಾರೆ. ಪ್ರತಿ ಚುನಾವಣೆಯಲ್ಲಿಯೂ ದಲಿತರ ವೋಟು ಪಡೆಯುತ್ತಿರುವ ಕಾಂಗ್ರೆಸ್ ದಲಿತ ನಾಯಕರನ್ನು ಮುಖ್ಯಮಂತ್ರಿ ಮಾಡಬೇಕಿರುವುದು ಪಕ್ಷದ ಧರ್ಮ ಎಂದು ಛಲವಾದಿ ಮಹಾಸಭಾ ಆಶಿಸಿದೆ.
ಈ ಬಾರಿ ಕೇಂದ್ರ ಸಚಿವ ಎಂ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಸ್ಥಾನ ದಕ್ಕಬೇಕಾಗಿತ್ತು. ಆದರೆ, ಪಕ್ಷದ ವರಿಷ್ಠರ ನಿರ್ಧಾರದಿಂದ ಅದು ಸಿದ್ದರಾಮಯ್ಯ ಅವರ ಪಾಲಾಯಿತು. ಅವರು ಆಗಿದ್ದಕ್ಕೆ ನಮ್ಮ ಆಕ್ಷೇಪವಿಲ್ಲ. ಅಧಿಕಾರ ಹಂಚಿಕೆಯ ಮುಂದಿನ ಕಂತಿನಲ್ಲಾದರೂ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಮಹಾಸಭಾದ ಜಿಲ್ಲಾಧ್ಯಕ್ಷ ಎಂ. ಹಂಸರಾಜು ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಸೋಲಿಲ್ಲದ ಸರದಾರ ಎಂದೇ ಪ್ರಸಿದ್ಧಿ ಪಡೆದವರು. ಅವರಿಗೆ ಸಾಂಪ್ರದಾಯಿಕವಾಗಿ ಮುಖ್ಯಮಂತ್ರಿ ಪಟ್ಟ ದೊರಕದೆ ಇದ್ದದ್ದು ನಮಗೆಲ್ಲ ನೋವಾಗಿದೆ. 30-30 ತಿಂಗಳ ಫಾರ್ಮುಲಾ ಬಳಸಲಾಗಿದೆ ಎಂಬ ಮಾಹಿತಿ ಮಾಧ್ಯಮದ ಮೂಲಕ ತಿಳಿದಿದ್ದು, ಮುಂದಿನ ಕಂತಿನಲ್ಲಾದರು ಖರ್ಗೆ ಅವರನ್ನು ಸಿಎಂ ಮಾಡುವಂತೆ ಅವರು ಕೋರಿದರು.
ಪದಾಧಿಕಾರಿಗಳಾದ ನಟರಾಜು, ಸುರೇಶ್, ಪ್ರತಾಪ್, ಸರ್ವೇಶ್ ಇದ್ದರು.

ಅಂಬೇಡ್ಕರ್ ಸಂಘದ ಆಗ್ರಹ
ಸ್ವಾತಂತ್ರ್ಯ ಬಂದು 60 ವರ್ಷವಾಗಿದ್ದರು ಈವರೆಗೆ ಕೇಂದ್ರದಲ್ಲಿ ಪ್ರಧಾನಮಂತ್ರಿ ಹುದ್ದೆಯಾಗಲಿ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಯಾಗಲಿ ದಲಿತರನ್ನು ಕೂರಿಸಿದ ಒಂದೂ ಸನ್ನಿವೇಶ ಇಲ್ಲ. ಈಗ ರಾಜ್ಯದಲ್ಲಿ ಕಾಂಗ್ರೆಸ್‌ಗೆ ನಿಚ್ಚಳ ಬಹುಮತ ಲಭಿಸಿದ್ದು ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಮ್ ಅಭಿವೃದ್ಧಿ ಸಂಘದ ಅಧ್ಯಕ್ಷ ಬಿ. ಲಿಂಗರಾಜು, ಕಾರ್ಯದರ್ಶಿ ಆರ್. ಗೋಪಾಲಕೃಷ್ಣ, ರಾಜಲಕ್ಷ್ಮೀ ಮೊದಲಾದವರು ವರಿಷ್ಠರನ್ನು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.