ಮೈಸೂರು

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ರಾಜಿನಾಮೆಗೆ ಒತ್ತಾಯ

Published On :

ಕ.ಪ್ರ.ವಾರ್ತೆ   ಕೆ.ಆರ್. ನಗರ   ಮೇ 13
ತಾಲೂಕಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಹಿನ್ನೆಲೆಯಲ್ಲಿ ಕೆ.ಆರ್. ನಗರ ಮತ್ತು ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್.ಪಿ. ಆನಂದ್, ಬಿ.ಎಲ್. ರಾಜಶೇಖರ್ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಕೆ.ಪಿ. ಪ್ರಭುಶಂಕರ್ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಬೇಕು ಎಂದು ಕೆ.ಆರ್. ನಗರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಜಿ.ಎಂ. ಹೇಮಂತ್ ಒತ್ತಾಯಿಸಿದ್ದಾರೆ.
ಪಕ್ಷ ಸಂಘಟನೆಯಲ್ಲಿ ವಿಫಲರಾಗಿರುವ ಇವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ. ಜತೆಗೆ ಇವರ ಸ್ವ- ಗ್ರಾಮಗಳಲ್ಲಿಯೇ ಪಕ್ಷ ತೀವ್ರ ಹಿನ್ನಡೆ ಅನುಭವಿಸಿದ್ದು, ಇದರಿಂದ ಪಕ್ಷಕ್ಕೆ ಮುಜುಗರವಾಗಿದೆ. ಹಾಗಾಗಿ ಕೂಡಲೇ ತಮ್ಮ ಸ್ಥಾನ ತ್ಯಜಿಸಬೇಕು. ಜಿಲ್ಲಾ ಮತ್ತು ರಾಜ್ಯ ಕಾಂಗ್ರೆಸ್ ಸಮಿತಿಯವರು ಕೂಡಲೇ ತ್ವರಿತ ಕ್ರಮ ಕೈಗೊಂಡು ದಕ್ಷರು, ಪ್ರಾಮಾಣಿಕರು ಮತ್ತು ಯುವಕರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳ ಸ್ಥಾನವನ್ನು ನೀಡಿ ತಾಲೂಕಿನಲ್ಲಿ ಪಕ್ಷದ ಸಂಘಟನೆಗೆ ಅವಕಾಶ ಕಲ್ಪಿಸಬೇಕು ಎಂದು ಹೇಮಂತ್, ಜಿ.ಡಿ. ಅರುಣ್‌ಕುಮಾರ್, ಜಿ.ಎನ್. ಮಂಜುನಾಥ್, ಗಂದನಹಳ್ಳಿ ಕೆಂಪರಾಜ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.