ಸಾಮಾಜಿಕ ನ್ಯಾಯ ಪರಿಕಲ್ಪನೆ ಜಗತ್ತಿಗೆ ಪರಿಚಯಿಸಿದ್ದು ಬವಸಣ್ಣ: ತಹಸೀಲ್ದಾರ್ ಶಿವಾನಂದಮೂರ್ತಿ ಅಭಿಮತ
ಕ.ಪ್ರ.ವಾರ್ತೆ ಹುಣಸೂರು ಮೇ 13
ಬಸವಣ್ಣನವರು 12ನೇ ಶತಮಾನದಲ್ಲೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಜಗತ್ತಿಗೆ ನೀಡಿ, ಜಾತಿ ಮತ ಮೀರಿ ಸಮಾಜ ಸುಧಾರಣೆಗೆ ತೊಡಗಿಸಿಕೊಂಡಿದ್ದರೆಂದು ತಹಸೀಲ್ದಾರ್ ಬಿ.ಸಿ. ಶಿವಾನಂದಮೂರ್ತಿ ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯಿಂದ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಬಸವ ಜಯಂತಿಯ ಸರಳ ಸಮಾರಂಭದಲ್ಲಿ ಮಾತನಾಡಿ, ಜಗಜ್ಯೋತಿ ಬಸವಣ್ಣನ ವಚನಗಳ ಸಾರ ಸರ್ವರಿಗೂ ಸಮಪಾಲು ಸಮಬಾಳು ಎನ್ನುವ ನೀತಿ 21ನೇ ಶತಮಾನದ ಆದರ್ಶ ಸೂತ್ರವಾಗಲಿದೆ ಎಂದು ಹೇಳಿದರು.
ಇಒ ಮಹದೇವಸ್ವಾಮಿ, ಡಿವೈಎಸ್ಪಿ ಮುದ್ದುಮಹದೇವಯ್ಯ, ದಲಿತ ಮುಖಂಡರಾದ ಡಿ. ಕುಮಾರ್, ನಿಂಗರಾಜ ಮಲ್ಲಾಡಿ, ಜಿಪಂ ಎಇಇ ವಾಸು, ಎಸ್ಐ ಹರಿವರ್ಧನ್, ಕಸಾಪ ಮಾಜಿ ಅಧ್ಯಕ್ಷ ಜಯರಾಂ ಸೇರಿದಂತೆ ಇತರರು ಇದ್ದರು.
ಕಾಂಗ್ರೆಸ್ ಕಚೇರಿಯಲ್ಲಿ ಬಸವ ಜಯಂತಿ
ಹುಣಸೂರು: ಸಮಾಜದ ಅಂಕು- ಡೊಂಕು ತಿದ್ದಿ, ಉನ್ನತ ಆದರ್ಶ ಬೋಧಿಸಿದ ಮಹಾನ್ ದಾರ್ಶನಿಕ ಬಸವಣ್ಣ ಆಗಿದ್ದರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು ಹೇಳಿದರು.
ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಾಪಂ ಸದಸ್ಯ ರಂಗಸ್ವಾಮಿ, ಮುಖಂಡರಾದ ಜಯರಾಂ ಮಾತನಾಡಿದರು. ಪುರಸಭಾ ಸದಸ್ಯ ನರಸಯ್ಯ, ಮಾಜಿ ಪುರಸಭಾಧ್ಯಕ್ಷ ಎಂ. ರವಿಶಂಕರ್, ಕೆ. ನಾಗರಾಜು, ಎಚ್.ಕೆ. ಕೃಷ್ಣಯ್ಯ, ಖಾಲಿದ್, ಸಂತೋಷ್, ಅಫ್ರೋಜ್ ಅಹಮದ್, ಶ್ರೀನಿವಾಸ್, ನಟರಾಜ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

