ಕ.ಪ್ರ.ವಾರ್ತೆ ಪಿರಿಯಾಪಟ್ಟಣ ಮೇ 13
ದಲಿತರಿಗೆ ರಾಜ್ಯದ ಮುಖ್ಯಮಂತ್ರಿ ಹುದ್ದೆ ನೀಡದೆ ಅನ್ಯಾಯ ಮಾಡಿರುವ ಕಾಂಗ್ರೆಸ್ ಪಕ್ಷದ ದಲಿತ ವಿರೋಧಿ ನೀತಿ ವಿರುದ್ಧ ತಾಲೂಕಿನ ವಿವಿಧ ದಲಿತ ಸಂಘಟನೆಗಳ ಒಕ್ಕೂಟ ಪಟ್ಟಣದಲ್ಲಿ ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಿದರು.
ಇಲ್ಲಿನ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿ ಮುಂಭಾಗದಿಂದ ಮೆರವಣಿಗೆ ಹೊರಟ ದಲಿತ ಸಂಘಟನೆಗಳ ಕಾರ್ಯಕರ್ತರು, ಬೆಟ್ಟದಪುರ ಸರ್ಕಲ್ನಲ್ಲಿ ಕೆಲಕಾಲ ರಾಜ್ಯ ಹೆದ್ದಾರಿ ಬಂದ್ ಮಾಡಿ, ನಂತರ ತಾ. ಕಚೇರಿಗೆ ತೆರಳಿ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಸಂಸ ಜಿಲ್ಲಾ ಸಂಚಾಲಕ ಸಿ.ಎಚ್. ಜಗದೀಶ್ ಮಾತನಾಡಿದರು. ಮಂಜುನಾಥ್, ಮಹದೇವ್, ಸೋಮಶೇಖರ್, ಸಣ್ಣಪ್ಪ, ಸ್ವಾಮಿ, ಚೆಲುವಯ್ಯ, ನಾಗರಾಜು, ರಾಜಯ್ಯ, ದೇವರಾಜ್, ದೇವಯ್ಯ, ಶೋಭಾ, ಮಾಜಿ ಪೊಲೀಸ್ ಅಧಿಕಾರಿ ಅಣ್ಣಯ್ಯ ಇದ್ದರು.