ಮೈಸೂರು

ಹಾಲಿಗೆ ಪ್ರೋತ್ಸಾಹಧನ: ಸಿಎಂಗೆ ಅಭಿನಂದನೆ

Published On :

ಮೈಸೂರು: ರಾಜ್ಯದಲ್ಲಿನ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 4 ಪ್ರೋತ್ಸಾಹಧನ ಘೋಷಿಸಿರುವ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಮಹಾಮಂಡಳ ಅಭಿನಂದಿಸಿದೆ.
ಕಳೆದ ಒಂದು ವರ್ಷದಿಂದ ರಾಜ್ಯಾದ್ಯಂತ ಮಳೆಯಿಲ್ಲದೆ ಕೃಷಿ ಬಿಟ್ಟು ಕೂಲಿಗಾಗಿ ಪಟ್ಟಣದ ಕಡೆ ಮುಖ ಮಾಡಿದ್ದರು. ಇತ್ತ ಹೈನುಗಾರಿಕೆ ಮಾಡಲು ಉತ್ಪಾದನಾ ವೆಚ್ಚ ಜಾಸ್ತಿಯಾಗಿದ್ದು ಸಹ ಊರು ಬಿಡಲು ಕಾರಣವಾಗಿತ್ತು. ಇದನ್ನರಿತಿದ್ದ ಹಿಂದಿನ ಸರ್ಕಾರ ಪ್ರತಿ ಲೀಟರ್ ಹಾಲಿಗೆ 2 ಪ್ರೋತ್ಸಾಹಧನ ನೀಡಿತ್ತಾದರು ಅದು ಸಾಲುತ್ತಿರಲಿಲ್ಲ. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ ತತ್‌ಕ್ಷಣದಲ್ಲೇ ಪ್ರೋತ್ಸಾಹಧನ ಹೆಚ್ಚಿಸಿರುವುದು ರೈತರ ಪಾಲಿಗೆ ಮರಳುಗಾಡಿನಲ್ಲಿ ನೀರು ಸಿಕ್ಕಿದಂತಾಗಿದೆ ಎಂದು ಪದಾಧಿಕಾರಿಗಳಾದ ಎಸ್. ಶಿವನಾಗಪ್ಪ, ರಮೇಶ್, ಟಿ.ಎ. ಸುಬ್ಬರಾವ್, ದಯಾನಂದ್ ರಾವ್, ತಾರಾ ನಂಜುಂಡಸ್ವಾಮಿ ಶ್ಲಾಘಿಸಿದ್ದಾರೆ.
ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕೆಲಸ ಮಾಡುವ ನೌಕರನೂ ಹಾಲು ಉತ್ಪಾದಕರ ಮಕ್ಕಳೇ ಆಗಿರುವುದರಿಂದ ಅವರಿಗೆ ಉದ್ಯೋಗ ಭದ್ರತೆ ಜತೆಗೆ ಪ್ರತಿ ಲೀಟರ್ ಹಾಲಿಗೆ 1 ಕಮಿಷನ್ ನೀಡುವಂತೆ ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.