ಕ.ಪ್ರ.ವಾರ್ತೆ , ಮೈಸೂರು , ಮೇ 15
ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ನಾಪತ್ತೆಯಾಗಿದ್ದಾರೆ.
ಚಂದ್ರು ಎಂಬವರ ಪತ್ನಿ ಮೀನಾ (23) ಮೇ 5 ರಂದು ನಾಪತ್ತೆಯಾದವರು. ಚಹರೆ- 5.5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು, ಕನ್ನಡ ಮತ್ತು ಹಿಂದಿ ಮಾತನಾಡುತ್ತಾರೆ.
ಚೆನ್ನೈಗೆ ಹೋದ ಲೇ. ಅಬ್ದುಲ್ ವಾಜೀದ್ ಎಂಬವರ ಪುತ್ರ ಅಜಾಂ ಪಾಶ (40) ನಾಪತ್ತೆಯಾಗಿದ್ದಾರೆ. ಚಹರೆ- 5.8 ಅಡಿ ಎತ್ತರ, ಗೋದಿ ಮೈಬಣ್ಣ, ಕೋಲು ಮುಖ, ದೃಢಕಾಯ ಶರೀರ, ಕನ್ನಡ, ಉರ್ದು ಮತ್ತು ಇಂಗ್ಲಿಷ್ ಮಾತನಾಡುತ್ತಾರೆ. ಕಾಣೆಯಾಗಿರುವ ಈ ಇಬ್ಬರ ಬಗ್ಗೆ ಮಾಹಿತಿ ಸಿಕ್ಕಲ್ಲಿ ದೂ. 0821- 2418309, 509 ಸಂಪರ್ಕಿಸಲು ಉದಯಗಿರಿ ಠಾಣೆ ಪೊಲೀಸರು ಕೋರಿದ್ದಾರೆ