ಮೈಸೂರು

ಕೆಂಪಿಸಿದ್ದನಹುಂಡಿಯಲ್ಲಿ ಹಬ್ಬದ ವಾತಾವರಣ

Published On :

ನಂಜನಗೂಡು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಕೆಂಪಿಸಿದ್ದನಹುಂಡಿ ಹಬ್ಬದ ರೀತಿಯಲ್ಲಿ ಸಂಭ್ರಮವನ್ನು ಆಚರಿಸಲಾಯಿತು. ಗ್ರಾಮದ ಟ್ಯಾಂಕ್ ಬಳಿ 55 ಅಡಿ ಎತ್ತರದ ಸಿದ್ದರಾಮಯ್ಯ ಅವರ ಫ್ಲೆಕ್ಸ್ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ನಂತರ ವಿವಿಧ ಗ್ರಾಮಗಳಿಗೆ ತೆರೆಳಿ ಮನೆ ಮನೆಗೆ ಸಿಹಿ ಹಂಚಲಾಯಿತು.
ಗ್ರಾಮದಲ್ಲಿ ತಮ್ಮ ಮನೆಗಳಿಗೆ ರಂಗೋಲಿ, ತಳಿರು- ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿಸಿ ಹಬ್ಬದ ದಿನದಂತೆ ಆಚರಿಸಿದರು. ಮುಖಂಡರಾದ ಕೆಂಪಣ್ಣ, ಹಿಮ್ಮಾವು ಶಿವಣ್ಣ, ಗ್ರಾಪಂ ಅಧ್ಯಕ್ಷ ಶಿವನಂಜಪ್ಪ ಮಾತನಾಡಿ, ಹಿಂದುಳಿದ ವರ್ಗದ, ಅಲ್ಪಸಂಖ್ಯಾತರ, ಕನಸು ನನಸು ಮಾಡುವ ಹರಿಕಾರ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರನ್ನು ಅಭಿನಂದಿಸುತ್ತೇವೆ ಎಂದರು. ಕಾಂಗ್ರೆಸ್ ಮುಖಂಡರಾದ ಕೆಂಪಣ್ಣ, ಸಿದ್ದು, ಶಿವನಂಜಯ್ಯ, ಶಿವಣ್ಣ, ನಂಜಪ್ಪ, ನಂಜಯ್ಯ, ಮಹದೇವಸ್ವಾಮಿ, ಡೈರಿ ಬೀರಯ್ಯ, ಮಹದೇವು, ಕೃಷ್ಣ, ನೀಲಿಸಿದ್ದು, ಶಿವಮಾದು ಗ್ರಾಮದ ಯಜಮಾನರು ಯುವಕ ಸಂಘ ಸೇರಿದಂತೆ ನೂರಾರು ಮಂದಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.