ಮೈಸೂರು: ನಗರದ ಯಾದವಗಿರಿಯಲ್ಲಿರುವ ಜೆಎಸ್ಎಸ್ ಅಂಗವಿಕಲರ ಉದ್ಯೋಗಸ್ಥ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ವಸತಿನಿಲಯಕ್ಕೆ 2013-14ನೇ ಸಾಲಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.
ಈ ವಸತಿ ನಿಲಯಕ್ಕೆ ಪ್ರವೇಶ ಪಡೆದ ನಿವಾಸಿಗಳಿಗೆ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುವುದು. ಇಲ್ಲಿಗೆ ಸೇರಬಯಸುವ ವಿದ್ಯಾರ್ಥಿನಿಯರು ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ, ವೃತ್ತಿ ತರಬೇತಿ ಮಾಡುತ್ತಿರಬೇಕು ಮತ್ತು ಬಡತನ ರೇಖೆಗಿಂತ ಕೆಳಗಿರುವವರಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಶಿವಲಿಂಗಯ್ಯ- ಮೊ. 9740597011, ದೇವಪ್ಪ- ಮೊ. 9900666205, ನಿರ್ಮಲ- 9972915027 ಸಂಪರ್ಕಿಸಬಹುದು.