ಆಶ್ರಮಕ್ಕೆ ಜಾಗ: ನಿರ್ಧಾರ ವಾಪಸ್ ಪಡೆಯಲು ಆಗ್ರಹ
ಮೈಸೂರು: ನಗರದ ಮಹಾರಾಣಿ ಮಾದರಿ ಕನ್ನಡ ಶಾಲೆ (ಎನ್ಟಿಎಂಎಸ್) ಜಾಗವನ್ನು ಉಚಿತವಾಗಿ ಶ್ರೀರಾಮಕೃಷ್ಣಾಶ್ರಮಕ್ಕೆ ನೀಡಿರುವ ಹಿಂದಿನ ಸರ್ಕಾರದ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಕನ್ನಡ ಕ್ರಿಯಾ ಸಮಿತಿ ಮನವಿ ಮಾಡಿದೆ.
ಕಾಂಗ್ರೆಸ್ ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಪ್ರಣಾಳಿಕೆಯಲ್ಲಿ ಹೇಳಿದೆ. ಅದರ ಅನುಷ್ಠಾನವಾಗಿ ಮೊದಲ ಕಾರ್ಯಕ್ರಮವಾಗಿ ಈ ಶಾಲೆಯ ಸಮಾಧಿ ಮಾಡುವ ಹಿಂದಿನ ಸರ್ಕಾರದ ನಿರ್ಣಯವನ್ನು ಹಿಂತೆಗೆದುಕೊಳ್ಳಬೇಕೆಂದು ಸಮಿತಿಯ ಅಧ್ಯಕ್ಷ ಪ. ಮಲ್ಲೇಶ್, ಪ್ರಧಾನ ಕಾರ್ಯದರ್ಸಿ ಸ.ರ. ಸುದರ್ಶನ, ಖಜಾಂಚಿ ಕೊ.ಸು. ನರಸಿಂಹಮೂರ್ತಿ ಒತ್ತಾಯಿಸಿದ್ದಾರೆ.
ಹಿಂದಿನ ಸರ್ಕಾರದ ನಿರ್ಧಾರವನ್ನು ಜಿಲ್ಲಾ ಪಂಚಾಯತ್ ಪಕ್ಷಾತೀತವಾಗಿ ವಿರೋಧಿಸಿದೆ. ಹತ್ತಕ್ಕಿಂತ ಕಡಿಮೆ ಇರುವ ಶಾಲೆಯನ್ನು ಮಾತ್ರ ಮುಚ್ಚಲು ಸರ್ಕಾರಿ ಆದೇಶವಿದ್ದು, ಅದಕ್ಕಿಂತ ಹೆಚ್ಚು ಮಕ್ಕಳಿರುವ ಮಹಾರಾಣಿ ಮಾದರಿ ಶಾಲೆಯನ್ನು ಮುಚ್ಚುವುದು ಹೈಕೋರ್ಟ್ ಆದೇಶಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
20 ವರ್ಷಗಳ ಹಿಂದೆ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಇಲ್ಲದಿದ್ದಾಗ ರಾಜ್ಯಕ್ಕೆ ಮಾದರಿಯಾದ ಹೆಮ್ಮೆಯ ಇತಿಹಾಸವಿರುವ ಈ ಶಾಲೆಯನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡು ಹೋಗಬೇಕು, ಈ ಶಾಲೆಯನ್ನು ಬೇರೆಡೆ ವಿಲೀನಗೊಳಿಸುವ ಬದಲು, ಅಕ್ಕಪಕ್ಕದ ಶಾಲೆಗಳನ್ನೇ ಇಲ್ಲಿಗೆ ವಿಲೀನಗೊಳಿಸಿ, ಶಾಲೆಯ ಅಭಿವೃದ್ಧಿಗೆ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದರು. ಈಗ ಅಧಿಕಾರಕ್ಕೆ ಬಂದಾಗ, ಅವರ ಕಣ್ಣ ಮುಂದೆಯೇ ಅದರ ಸಮಾಧಿಯಾಗುವ ಪರಿಸ್ಥಿತಿ ಇರುವುದು ವಿಪರ್ಯಾಸ. ಆದ್ದರಿಂದ ಈ ಶಾಲೆಯನ್ನು ಉಳಿಸುವ ಸಲುವಾಗಿ ರಾಮಕೃಷ್ಣಾಶ್ರಮಕ್ಕೆ ಕೊಟ್ಟಿರುವ ಜಾಗವನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಜಿಪಂ ನಿರ್ಣಯಾನುಸಾರ ಮುಂದಿನ ಸಚಿವ ಸಂಪುಟದಲ್ಲಿ ತೆಗೆದುಕೊಳ್ಳಬೇಕೆಂದು ಅವರು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

