ಸಮರ್ಪಕ ಕುಡಿಯುವ ನೀರು ಪೂರೈಸಿ
ಕ.ಪ್ರ.ವಾರ್ತೆ , ಮೈಸೂರು , ಮೇ 17
ನಗರ ಮತ್ತು ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿ ಮತ್ತು ನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಬೆಂಗಳೂರಿಗೆ ತೆರಳುವ ಮುನ್ನ ಶುಕ್ರವಾರ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ನಗರ ಮತ್ತು ಜಿಲ್ಲೆಯ ಕುಡಿಯುವ ನೀರಿನ ಸದ್ಯದ ಪರಿಸ್ಥಿತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಅನುದಾನದ ಬಗ್ಗೆ ಚಿಂತೆ ಬೇಡ. ಜನರಿಗೆ ಮೂಲಭೂತ ಸೌಲಭ್ಯಗಳಲ್ಲಿ ಒಂದಾದ ಪರಿಶುದ್ಧ ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸುವುದು ಮುಖ್ಯ. ಇದಕ್ಕಾಗಿ ಅಗತ್ಯ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲು ಸಿದ್ಧವಿದೆ. ಆದರೆ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ವಿಮಾನ ನಿಲ್ದಾಣದಲ್ಲೇ ಊಟ: ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿದ್ದರಾಮಯ್ಯ ಮನೆಯಿಂದ ತಂದಿದ್ದ ಊಟವನ್ನು ಕಾರಿನಲ್ಲಿ ಕುಳಿತು ಸೇವಿಸಿದರು. ಮಧ್ಯಾಹ್ನ 3.20ಕ್ಕೆ ಆಗಮಿಸಿ ಊಟ ಮಾಡಿದ ಬಳಿಕ 3.40ಕ್ಕೆ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.
ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ಎಚ್.ಎಸ್. ಮಹದೇವಪ್ರಸಾದ್, ಶಾಸಕರಾದ ಎಂ.ಕೆ. ಸೋಮಶೇಖರ್, ವಾಸು, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ. ಬಸವೇಗೌಡ, ಸಿಟಿ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಪಿ. ನಾಗರಾಜ್, ಮಾಜಿ ಮೇಯರ್ ಅಯೂಬ್ ಖಾನ್, ಪ್ರಾದೇಶಿಕ ಆಯುಕ್ತೆ ಎಂ.ವಿ. ಜಯಂತಿ, ಜಿಲ್ಲಾಧಿಕಾರಿ ಸಿ. ಶಿಖಾ, ನಗರ ಪೊಲೀಸ್ ಆಯುಕ್ತ ಕೆ.ಎಲ್. ಸುಧೀರ್, ಎಸ್ಪಿ ಆರ್. ದಿಲೀಪ್, ಡಿಸಿಪಿಗಳಾದ ಭೀಮಯ್ಯ, ಶಾಂತನು ಸಿನ್ಹಾ, ಪ್ರಭಾಶಂಕರ್, ಪಾಲಿಕೆ ಆಯುಕ್ತ ಪಿ.ಜಿ. ರಮೇಶ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

