ಮೈಸೂರು

ಎಂಡಿಎ, ಪಾಲಿಕೆ ವಿರುದ್ಧ ಲೋಕಾಯುಕ್ತಗೆ ದೂರು

Published On :

ಮೈಸೂರು: ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಿಗಾಗಿ ವಿಳಂಬ, ಲಂಚದ ಬೇಡಿಕೆ ಹಾಗೂ ಇನ್ನಿತರ ತೊಂದರೆ ನೀಡುವ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಮೈಸೂರಿನ ಲೋಕಾಯುಕ್ತ ಪೊಲೀಸರು ಚಾಮುಂಡಿ ಅತಿಥಿ ಗೃಹದಲ್ಲಿ ಸೋಮವಾರ ಸಾರ್ವಜನಿಕರಿಂದ ದೂರು ಸ್ವೀಕರಿಸಿದರು.
ಈ ಬಾರಿ ಒಟ್ಟಾರೆ 16 ದೂರುಗಳು ಬಂದಿದ್ದು, ಇದರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ನಗರಪಾಲಿಕೆ ವಿರುದ್ಧ ಹೆಚ್ಚಿನ ದೂರುಗಳಿವೆ. 5 ದೂರುಗಳು ಎಂಡಿಎ ಹಕ್ಕುಪತ್ರ ನೀಡಲು ವಿಳಂಬ, 6 ದೂರುಗಳು ನಗರಪಾಲಿಕೆಯು ಖಾತೆ ಬದಲಾವಣೆ, ಒಳಚರಂಡಿ ಸೇರಿದಂತೆ ಇನ್ನಿತರ ಸಮಸ್ಯೆಗಳಿಗೆ ಸಂಬಂಧಿಸಿವೆ. ಉಳಿದಂತೆ ವಿವಿಧ ಇಲಾಖೆಗಳು, ಗ್ರಾಪಂ, ತಾಪಂ ಸಂಬಂಧಿಸಿದಂತೆ ಕೆಲಸ ಕಾರ್ಯಗಳ ವಿಳಂಬ ಹಾಗೂ ಲಂಚದ ಬೇಡಿಕೆ ಕುರಿತು ಸಾರ್ವಜನಿಕರು ದೂರು ನೀಡಿದ್ದಾರೆ. ಲೋಕಾಯುಕ್ತ ಪೊಲೀಸರು ಸಾರ್ವಜನಿಕರಿಂದ ಸ್ವೀಕರಿಸಿರುವ ದೂರುಗಳನ್ನು ಪರಿಶೀಲಿಸಿ, ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಪರಶುರಾಮ್, ಇನ್ಸ್‌ಪೆಕ್ಟರ್ ಧರ್ಮೇಂದ್ರ ಮತ್ತು ಸಿಬ್ಬಂದಿ ದೂರು ಸ್ವೀಕರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.