ಮೈಸೂರು

ಕೈಗೆ ಸಿಕ್ಕಿರೋದು ಬಿಜೆಪಿ ವಿರೋಧಿ ಮತ

Published On :

ಕ.ಪ್ರ.ವಾರ್ತೆ ,  ಮೈಸೂರು ,  ಮೇ 20
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ಭಾಗದಲ್ಲಿ ಬಿಜೆಪಿಗೆ ನಿರೀಕ್ಷಿತ ಸ್ಥಾನಗಳು ಸಿಗಲಿಲ್ಲ ಎಂದು ಮಾಜಿ ಸಚಿವ ಎಸ್. ಸುರೇಶ್‌ಕುಮಾರ್ ವಿಷಾದಿಸಿದರು.
ಮೈಸೂರಿನಲ್ಲಿ ಸೋಮವಾರ ನಡೆದ ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಭಿವೃದ್ಧಿಗೆ ಒತ್ತು ನೀಡಿತ್ತು. ಆದರೆ, ಪಕ್ಷದೊಳಗಿನ ಭಿನ್ನಮತ, ಗೊಂದಲ, ಭ್ರಷ್ಟಾಚಾರಗಳಿಂದ ಮತದಾರರು ಬಿಜೆಪಿ ವಿರುದ್ಧ ಮತ ನೀಡಿದ್ದಾರೆ ಎಂದರು.
ಕಾಂಗ್ರೆಸ್ ಪರವಾಗಿ ಮತದಾರರು ತಮ್ಮ ಮತ ಚಲಾಯಿಸಿಲ್ಲ. ಬಿಜೆಪಿ ವಿರೋಧಿ ಮತಗಳು ಕಾಂಗ್ರೆಸ್‌ಗೆ ಸಿಕ್ಕಿರುವುದು ಅಂಕಿ ಅಂಶಗಳಿಂದ ಗೊತ್ತಾಗುತ್ತದೆ. ನಮ್ಮನ್ನು ವಿರೋಧ ಪಕ್ಷದಲ್ಲಿ ಕೂರಿಸಿ ಮತದಾರರು ಆದೇಶ ನೀಡಿದ್ದಾರೆ. ಅದನ್ನು ಪಾಲಿಸಬೇಕಿದೆ ಎಂದು ಅವರು ಹೇಳಿದರು.
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಡ ರಾಜ್ಯಗಳ ಚುನಾವಣೆ ಬರುತ್ತಿದೆ. ಇವುಗಳ ಜತೆಗೆ ಲೋಕಸಭಾ ಚುನಾವಣೆ ನಡೆಸಲು ಕಾಂಗ್ರೆಸ್ ಯೋಜಿಸಿದೆ. ಸೋಲಿನಿಂದ ಬಿಜೆಪಿ ಪಲಾಯನ ಆಗುವುದಿಲ್ಲ. ಮುಂದಿನ ಹೋರಾಟಕ್ಕೆ ಸಿದ್ಧವಾಗಬೇಕಿದ್ದು, ಈಗಿನ ಫಲಿತಾಂಶ ವಿಶ್ಲೇಷಿಸಬೇಕಿದೆ ಎಂದು ಅವರು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಸಿದ್ದರಾಜು, ನಗರಾಧ್ಯಕ್ಷ ಎಂ. ಶಿವಕುಮಾರ್, ವಿಧಾನಪರಿಷತ್ ಸದಸ್ಯ ಗೋ. ಮಧುಸೂದನ್, ಮಾಜಿ ಸದಸ್ಯ ತೋಂಟದಾರ್ಯ, ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ ಇದ್ದರು.
ರಾಮದಾಸ್ ಗೈರು: ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಸ್.ಎ. ರಾಮದಾಸ್ ಅವರು ಈ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದು, ಆತ್ಮಾವಲೋಕನ ಸಭೆಗೆ ಗೈರು ಹಾಜರಾಗಿದ್ದರು. ಚುನಾವಣೆಯಲ್ಲಿ ಸೋತ ಎಲ್. ನಾಗೇಂದ್ರ, ಸಿ. ರಮೇಶ್ ಮತ್ತು ಇತರರು ಮಾತ್ರ ಸಭೆಯಲ್ಲಿ ಭಾಗವಹಿಸಿದ್ದರು. ನಂತರ ಕ್ಷೇತ್ರವಾರು ಆತ್ಮಾವಲೋಕನ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.