ಮಹಿಳಾ ವಿದ್ಯಾರ್ಥಿನಿಲಯ ಕಾಮಗಾರಿ ವಿಳಂಬ
ಕ.ಪ್ರ.ವಾರ್ತೆ , ಕೆ.ಆರ್. ನಗರ , ಮೇ 20
ಪಟ್ಟಣದಲ್ಲಿ ಪದವಿ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ವಿಶ್ವವಿದ್ಯಾಲಯದ ಯುಜಿಸಿ ಯೋಜನೆಯಡಿ ಎರಡು ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಮಹಿಳಾ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿ ವರ್ಷದಿಂದ ನಿಧಾನಗತಿಯಲ್ಲಿ ಸಾಗುತ್ತಿದೆ.
ಪಟ್ಟಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಇದ್ದು, ಇಲ್ಲಿನ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲು ಶಾಸಕ ಸಾ.ರಾ. ಮಹೇಶ್ ಕಾಲೇಜು ಆಡಳಿತ ಮಂಡಳಿಯ ಮೂಲಕ ವಿಶ್ವವಿದ್ಯಾಲಯಕ್ಕೆ ಮಹಿಳಾ ವಿದ್ಯಾರ್ಥಿ ನಿಲಯ ಆರಂಭಿಸಲು ಕಟ್ಟಡ ಮಂಜೂರು ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದರು.
ಈ ಮನವಿಯನ್ನು ಪುರಸ್ಕರಿಸಿದ್ದ ವಿವಿ, ಸದರಿ ಕಾಲೇಜಿಗೆ ಪರಿಶೀಲನಾ ತಂಡ ಕಳುಹಿಸಿಕೊಟ್ಟಿತ್ತು. ಪರಿಶೀಲನೆ ನಡೆಸಿ ವಿದ್ಯಾರ್ಥಿನಿಲಯ ಕಟ್ಟಡ ಕಾಮಗಾರಿಗೆ ಮಂಜೂರಾತಿ ಅನುಮೋದನೆ ನೀಡಿ ಎರಡು ಕೋಟಿ ರು.ಗಳನ್ನು ಬಿಡುಗಡೆಗೊಳಿಸಿದ್ದರಿಂದ ಶಾಸಕರೇ ವರ್ಷದ ಹಿಂದೆ ಕಾಮಗಾರಿಗೆ ಚಾಲನೆ ನೀಡಿದರು.
ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಮತ್ತು ಕಾಮಗಾರಿ ನಿರ್ವಹಣೆ ಮಾಡುವ ಇಲಾಖೆಯ ಅಸಡ್ಡೆಯಿಂದ ಕಟ್ಟಡ ಕಾಮಗಾರಿ ಗೋಡೆ ಹಂತದಲ್ಲಿಯೇ ನಿಂತಿದ್ದು ಇದರಿಂದ ಬಿಸಿಲು ಮಳೆಗೆ ಮೈಯೊಡ್ಡಿ ಸ್ಮಾರಕದಂತಾಗಿದೆ. ಕಾಮಗಾರಿ ಸ್ಥಗಿತವಾಗಿರುವುದರಿಂದ ಅನುದಾನವು ಬಿಡುಗಡೆಯಾಗುತ್ತಿಲ್ಲ.
ಆದರೂ ಯಾರು ಇತ್ತ ತಿರುಗಿ ನೋಡದಿರುವುದರಿಂದ ವಿದ್ಯಾರ್ಥಿ ನಿಲಯ ಆರಂಭವಾಗುವುದು ಮತ್ತಷ್ಟು ವಿಳಂಬವಾಗುತ್ತಿದೆ.
ಗುತ್ತಿಗೆದಾರ ಮತ್ತು ಅಧಿಕಾರಿಗಳ ಬೇಜವಾಬ್ದಾರಿಯಿಂದ ಅನುದಾನ ಸದ್ಬಳಕೆಯಾಗಿ ವಿದ್ಯಾರ್ಥಿನಿಯರಿಗೆ ಅನುಕೂಲವಾಗುತ್ತಿಲ್ಲ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳು ಕೂಡಲೇ ಸೂಕ್ತ ಕ್ರಮ ಕೈಗೊಂಡು ಸ್ಥಗಿತಗೊಂಡಿರುವ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಿ ವಿದ್ಯಾರ್ಥಿ ನಿಲಯದ ಬಳಕೆಯಾಗುವಂತೆ ಕ್ರಮ ಕೈಗೊಳ್ಳಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

