ಮೈಸೂರು

ಸ್ಪರ್ಧಾತ್ಮಕ ಸ್ಥಿತಿಗತಿಯನ್ನು ಯುವಕರಿಗೆ ತಿಳಿಸಿ

Published On :

ಕ.ಪ್ರ.ವಾರ್ತೆ ,  ಹುಣಸೂರು ,  ಮೇ 20
ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧೆಗೆ ಹೇಗೆ ಇಳಿಯುವುದೆಂಬುದನ್ನು ನಾವು ಯುವಕರಿಗೆ ತಿಳಿಸುವಲ್ಲಿ ವಿಫಲರಾಗಿದ್ದೇವೆ. ಅದನ್ನು ಈಗಲಾದರೂ ಆರಂಭಿಸಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕ ವಿಶ್ವನಾಥ್ ಭರಣಿ ಹೇಳಿದರು.
ಪಟ್ಟಣದ ಜೀನಿಯಸ್ ಕೋಚಿಂಗ್ ಸೆಂಟರ್ ಹಾಗೂ ರೋಟರಿ ಸಂಸ್ಥೆಯ ಸಹಯೋಗದಲ್ಲಿ ರೋಟರಿ ಭವನದಲ್ಲಿ ಆಯೋಜಿಸಿದ್ದ ಉಚಿತ ಉದ್ಯೋಗ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ಉದ್ಯೋಗಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕವೇ ಆಯ್ಕೆ ನಡೆಯುತ್ತದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿ ಸಿಗುತ್ತಿಲ್ಲ. ಸ್ಪರ್ಧೆಯನ್ನು ಎದುರಿಸುವ ರೀತಿ ನೀತಿ ತಿಳಿದಿಲ್ಲ.
ಇನ್ನು ಸಂದರ್ಶನ ಎದುರಿಸಲು ಭಯಪಡುವ ಸ್ಥಿತಿ ಇಂದಿಗೂ ಇದೆ. ಕೆಲವರಿಗೆ ಅರ್ಜಿ ಭರ್ತಿ ಮಾಡಲೂ ಬರುವುದಿಲ್ಲ. ಉದ್ಯೋಗ ಬಯಸುವ ಪ್ರತಿಯೊಬ್ಬರು ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ನಿತ್ಯ ಪತ್ರಿಕೆ ಓದುವ, ಗ್ರಂಥಾಲಯಕ್ಕೆ ಭೇಟಿ ನೀಡಿ ಅಭ್ಯಸಿಸುವ, ಮಾಹಿತಿ ಸಂಗ್ರಹಿಸುವ, ತರಬೇತಿಗಳಲ್ಲಿ ಭಾಗವಹಿಸುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸೂಚಿಸಿದರು.
ವೃತ್ತ ನಿರೀಕ್ಷಕ ಎಸ್.ಟಿ. ಚಂದ್ರಶೇಖರ್ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಉದ್ಯೋಗಾಕಾಂಕ್ಷಿಗಳು ಸರ್ಕಾರಿ ಉದ್ಯೋಗವೇ ಬೇಕೆಂಬ ಭ್ರಮೆಯಿಂದ ಹೊರಬರಬೇಕು ಎಂದರು.
ಪ್ರಾಧ್ಯಾಪಕ ಪುಟ್ಟಶೆಟ್ಟಿ, ರೋಟರಿ ಅಧ್ಯಕ್ಷ ಆರ್. ಆನಂದ್ ಮಾತನಾಡಿದರು. ಜೀನಿಯಸ್ ಸಂಸ್ಥೆಯ ವ್ಯವಸ್ಥಾಪಕ ನಾಗರಾಜ್ ಸಂಸ್ಥೆ ಹಮ್ಮಿಕೊಂಡಿರುವ ಕಾರ್ಯಚಟುವಟಿಕೆಗಳನ್ನು ವಿವರಿಸಿದರು. ಜಿಪಂ ಸದಸ್ಯ ರಮೇಶ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ನಿರ್ದೇಶಕ ಹರೀಶ್, ಎಸ್.ಐ. ಹರಿವರ್ಧನ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.